ಸರ್ಕಾರಿ ನೌಕರರೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ; ಬರ ಪರಿಸ್ಥಿತಿ, ಎಸ್‌ಐಆರ್ ಪ್ರಗತಿ ಪರೀಶೀಲನೆ
Chief Minister holds video interaction with government employees; reviews drought situation and SIR
ವಿಜಯನಗರ (ಹೊಸಪೇಟೆ), ಆ.11: ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೇರ ಸಂವಾದ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಆಶಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕರೆ ನೀಡಿದರು.
ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸರ್ಕಾರಿ ನೌಕರರೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾತನಾಡಿದರು. ರಾಜ್ಯದ 750 ಸ್ಥಳಗಳಿಂದ ಸುಮಾರು 5.50 ಲಕ್ಷ ಸರ್ಕಾರಿ ನೌಕರರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸರ್ಕಾರಿ ನೌಕರರು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾರೆ. ಸರ್ಕಾರದ ಜನಕಲ್ಯಾಣ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕೇಂದ್ರ ಸ್ಥಾನದಲ್ಲೇ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ದೊರೆಯಬೇಕು ಎಂಬ ಉದ್ದೇಶದಿಂದ ‘ಪ್ರಜಾ ಸೇವೆ’ ಇಲಾಖೆಯ ಮೂಲಕ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಪ್ರಜಾ ಸೇವೆ ಇಲಾಖೆಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪ್ರತಿ ಜಿಲ್ಲೆಯ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 