ಪರಿಶಿಷ್ಟ ವರದಿಯನ್ನು ತಕ್ಷಣ ಸಲ್ಲಿಸಲು ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ಪರಿಶಿಷ್ಟ ವರದಿಯನ್ನು ತಕ್ಷಣ ಸಲ್ಲಿಸಲು ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ Chief Minister urges Backward Classes Commission to submit report immediately

                                                            ರಾಜ್ಯದಲ್ಲಿ ರಾಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒತ್ತಾಯ  

 ಕೋಪ್ಪಳ 3: ಕರ್ನಾಟಕದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ರಾಜಪೂತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ರಾಜಪೂತ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಕೋಪ್ಪಳ ಜಿಲ್ಲಾ ರಾಜಪೂತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಗ್ರಹಿಸಲಾಗಿದೆ.  ಈ ಸಂಬಂಧ ಸಂಘದ ನಿಯೋಗವು ಜಿಲ್ಲಾ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.  

ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಾಜಪೂತ ಸಮುದಾಯವು ಆರ್ಥಿಕ, ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಇನ್ನೂ ಹಿಂದುಳಿದ ಸ್ಥಿತಿಯಲ್ಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಸಮುದಾಯದ ಯುವಪೀಳಿಗೆಗೆ ಸೂಕ್ತ ಮಾರ್ಗದರ್ಶನ ಹಾಗೂ ಉದ್ಯೋಗಾವಕಾಶಗಳು ಸಿಗದಿರುವುದರಿಂದ ಅಭಿವೃದ್ಧಿಗೆ ಹಿನ್ನಡೆ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.  

ಈ ಹಿನ್ನೆಲೆಯಲ್ಲಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ‘ರಾಜಪೂತ ಅಭಿವೃದ್ಧಿ ಮಂಡಳಿ’ ಅನ್ನು ತಕ್ಷಣ ಸ್ಥಾಪಿಸಬೇಕು ಹಾಗೂ ಈ ಕುರಿತು ಪರಿಶಿಷ್ಟ ವರದಿಯನ್ನು ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಗಿದೆ.  

ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಆರಂಭವಾಗಿರುವ ಸಮೀಕ್ಷೆ ಮತ್ತು ಡಿಜಿಟಲ್ ನೋಂದಣಿ ಪ್ರಕ್ರಿಯೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಇದರ ಆಧಾರದ ಮೇಲೆ ಇತರ ಜಿಲ್ಲೆಗಳಲ್ಲಿಯೂ ಈ ಪ್ರಕ್ರಿಯೆಯನ್ನು ವಿಸ್ತರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.  

ಈ ಸಂದರ್ಭದಲ್ಲಿ ಜಿಲ್ಲಾ ರಾಜಪೂತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರ್ ಸಿಂಗ್ ರಾಜಪೂತ, ವೇಣುಗೋಪಾಲ್ ಸಿಂಗ್, ಭೀಮಸಿಂಗ್, ನರಪತ್ ಸಿಂಗ್, ವೀರೇಂದ್ರ ಸಿಂಗ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.