ಬಾಕಿ ಅನುದಾನ ಬಿಡುಗಡೆಗೆ ಹಣಕಾಸು ಸಚಿವರಿಗೆ ಮುಖ್ಯಮಂತ್ರಿ ಒತ್ತಾಯ.
ಬೆಂಗಳೂರು, ಜೂ 15: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಬ್ಯಾಂಕಿಂಗ್ ನೇಮಕಾತಿಯಲ್ಲಿ ಸ್ಥಳೀಯ ಭಾಷೆಗಳಲ್ಲಿ ಪರೀಕ್ಷಾ ಪದ್ದತಿ,ಬಾಕಿ ಉಳಿದಿರುವ ಅನುದಾನ,ಉದ್ಯೋಗ ಖಾತ್ರಿಯೋಜನೆಯಡಿ ಬಾಕಿ ಉಳಿದಿರುವ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವಂತೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು. ಅಲ್ಲದೆ, ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಒತ್ತಾಯ ಮಾಡಿದರು. ಇದಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಿಗೆ 2018-19ನೇ ಸಾಲಿಗೆ ಬಾಕಿ ಇರುವ 233 ಕೋಟಿ ರೂ. ಉತ್ತಮ ನಿರ್ವಹಣಾ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬ್ಯಾಂಕ್ ಖಾತೆಯಲ್ಲಿರುವ ಮೊತ್ತ ಹಾಗೂ ಬಡ್ಡಿ ಮೊತ್ತವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಕಾಯ್ದೆ 1961 ರ ನಿಯಮ 10(29ಎ) ಅಡಿ ಮಂಡಳಿಯನ್ನು ಸೇರ್ಪಡೆಗೊಳಿಸಿ, ಕಾಫಿ ಮಂಡಳಿ, ರಬ್ಬರ್ ಮಂಡಳಿಗಳಂತೆ, ಆದಾಯ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು. ಇದಲ್ಲದೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದ್ದು, ಕೇಂದ್ರದಿಂದ ಕೂಲಿ ಮುಂಗಡ ಹಣ ಸೇರಿದಂತೆ ಸುಮಾರು 1,500 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು. ಮುಖ್ಯಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾಕ್ಟರ್. ಇ. ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 