ಚಿಕ್ಕಮಗಳೂರು ಕೊರೋನಾ ಮುಕ್ತಗೊಳಿಸಲು ಆದ್ಯತೆ : ಸಿ.ಟಿ.ರವಿ

ಚಿಕ್ಕಮಗಳೂರು, ಏ 27,ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೋನಾ ವೈರಸ್ ಸೋಂಕು ಪತ್ತೆಯಾಗಿಲ್ಲ. ಕೊರೋನಾ ಮುಕ್ತ ಜಿಲ್ಲೆ ಮಾಡಲು ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.ಹಸಿರು ವಲಯವಾಗಿರುವ ಜಿಲ್ಲೆಯಲ್ಲಿ ಆಹಾರದ ಕಿಟ್‌ಗಳನ್ನು ಜನತೆಗೆ ವಿತರಿಸಿದ ಬಳಿಕ ಮತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಸೋಂಕು ಪ್ರಕರಣ ಕಂಡು ಬಂದಿಲ್ಲ. ಹಾಗೆಂದು ಅಸಡ್ಡೆ ತೋರದೇ ಎಚ್ಚರಿಕೆಯಿಂದ ನಿಯಮಗಳನ್ನು ಪಾಲಿಸಬೇಕು ಎಂದರು.ಜಿಲ್ಲೆಯಲ್ಲಿರುವ ೬೦೦ ಕ್ಕೂ ಹೆಚ್ಚು ವಲಸೆ, ಕೂಲಿ ಕಾರ್ಮಿಕರು ಅವರವರ ಜಿಲ್ಲೆಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಇತರರು ಬರದಂತೆ ಗಡಿಯಲ್ಲಿ ಭದ್ರತೆ ಹೆಚ್ಚಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತರಿಪಡಿಸುವಂತೆ, ಜನ ಗುಂಪು ಸೇರುವುದು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಸಭೆ ಸಮಾರಂಭ ನಡೆಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.