ಚಿಕ್ಕಮಗಳೂರು, ಮೇ 28, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮೂವರಲ್ಲಿ ಹೊಸ ಕೊರೋನಾ ಸೋಂಕು ದೃಢಪಟ್ಟಿವೆ. ಸೋಂಕಿತ ವ್ಯಕ್ತಿಗಳ ಸಂಖ್ಯೆ ಪಿ-2451, ಪಿ-2468, ಪಿ-2485 ಆಗಿದ್ದು ಓರ್ವ ವ್ಯಕ್ತಿ ನವದೆಹಲಿಯಿಂದ ಹಾಗೂ ಇನ್ನಿಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದು ಅವರುಗಳನ್ನು ಕ್ವಾರಂಟೈನ್‌ನಲ್ಲಿರಿಸಲಾಗಿತ್ತು.ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಸೋಂಕಿತರನ್ನು ಜಿಲ್ಲಾ ಕೋವಿಡ್ ಸೆಂಟರ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.