ಚಿಕ್ಕಪಡಸಲಗಿ: ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Chikkapadasalagi: Man commits suicide by jumping into Krishna river
ಚಿಕ್ಕಪಡಸಲಗಿ: ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಜಮಖಂಡಿ 07: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ವ್ಯಕ್ತಿಯೊಬ್ಬನು ಬ್ಯಾರೇಜ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯಪೂರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುನಗಿ ಗ್ರಾಮದ ಇಮಾಮಸಾಬ ಹಾಜಿಸಾಬ ವಾಲಿಕರ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಕಂಪ್ಯೂಟರ್ ಆನ್‌ಲೈನ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು. ಕೃಷ್ಣಾನದಿ ಬ್ಯಾರೇಜ್ ಮೇಲೆ ತನ್ನ ಮೋಟರ್ ಬೈಕ್ ನಿಲಿಸಿದ್ದು. ಮೃತನು ಕೈಗಡ ಸಾಲವನ್ನು ಮಾಡಿಕೊಂಡಿದ್ದ ಎಂದು ತಿಳಿದು ಬಂದಿದ್ದು. ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾನದಿ ತುಂಬಿ ರಭಸವಾಗಿ ಹರಿಯುತ್ತಿರುವದರಿಂದ ನದಿ ತೀರದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇಮಾಮಸಾಬ ಹಾಜಿಸಾಬ ವಾಲಿಕರ (36) ನದಿಗೆ ಹಾರಿದ್ದನ್ನು ಗಮನಿಸಿ ಮೀನುಗಾರರ ಸಹಾಯದಿಂದ ಪೊಲೀಸರು ವ್ಯಕ್ತಿಯನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ ಎಂದು ಸಾವಳಗಿ ಪಿಎಸ್‌ಐ ಅಪ್ಪಣ್ಣ ಐಗಳಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಾವಳಗಿ ಪೋಲಿಸ್ ಠಾಣೆಯ ಪಿಎಸ್‌ಐ ಅಪ್ಪಣ್ಣ ಐಗಳಿ ಹಾಗೂ ಸಿಬ್ಬಂದಿಗಳಾದ ಸುರೇಶ ಹುಚ್ಚಗೌಡರ, ರಾಜು ಪಡತಾರೆ, ಸದಾಶಿವ ಶೆಟ್ಟನವರ, ಬಸು ಮಾಳಿ ಮತ್ತು ಮೃತನ ಕುಟುಂಬಸ್ಥರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 