ಅಂಕಲಿಯಲ್ಲಿ ಚಿಕ್ಕೋಡಿ ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಟಿ
Chikkodi Taluka level women's seminar held in Ankali
ಮಾಂಜರಿ 25: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಮರಾಠಾ ಮಂಡಳದ ಸಭಾ ಭವನದಲ್ಲಿ ಮಂಗಳವಾರದಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸದ ವತಿಯಿಂದ ಚಿಕ್ಕೋಡಿ ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು. ಉದ್ಘಾಟಕರಾಗಿ ಆಗಮಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಯೋಜನೆಯು ನಡೆದು ಬಂದ ದಾರಿ, ಹಾಗೂ ಮಹಿಳಾ ಜ್ಞಾನ ವಿಕಾಸದ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಅರಿವು ಮೂಡಿಸುತ್ತ, ಮಹಿಳೆಯರಿಗೆ ಆಸಾದ್ಯವಾದದ್ದು ಯಾವುದೂ ಇಲ್ಲ, ಹತ್ತು ಮನಸುಗಳು ಕೂಡಿ, ದುಡಿದಲ್ಲಿ ಯಾವ ಕೆಲಸವೂ ಕಷ್ಟವಲ್ಲ ಎಂದು ಕಾರ್ಯಕ್ರಮದ ಕುರಿತು ಶ್ಲಾಘಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಸಂದ್ಯಾ ಸಂಜೀವ ಪಾಟೀಲ ಮಾತನಾಡಿ, ಮನುಷ್ಯನ ಆರೋಗ್ಯದ ಹಿತ ದೃಷ್ಟಿಯಿಂದ ಸಾಮಾಜಿಕವಾಗಿ, ಆರ್ಥಿಕವಾಗಿ, ಹಾಗೂ ಮನೋವೈಜ್ಞಾನಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಗಮನ ನೀಡುವ ಕುರಿತು ಮೋನೋಪಾಸ್ ಮತ್ತು ಗರ್ಭಕೋಶದ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಮತ್ತೊರ್ವ ಸಂಪನ್ಮೂಲ ವ್ಯಕ್ತಿ ಜಯಶ್ರೀ ಪ್ರಕಾಶ ಮಾಳಗೆ ಮಾತನಾಡಿ, ಕೌಟುಂಬಿಕ ಸಾಮರಸ್ಯದಲ್ಲಿ ಮಹಿಳೆಯರ ಪಾತ್ರದ ಕುರಿತು ಮಾಹಿತಿ ನೀಡಿದರು. ಚಿಕ್ಕೋಡಿ ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲಿಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ಸದಸ್ಯ ತುಕಾರಾಮ್ ಪಾಟೀಲ ವಹಿಸಿ, ಮಾತನಾಡಿದರು. ಮುಖ್ಯ ಅಥಿತಿಗಳಾಗಿ ವಿಠ್ಠಲ್ ಸಾಲಿಯಾನ್, ದಿವಾಕರ್ ಬಡಿಗೇರ್, ಮರಾಠಾ ಮಂಡಳದ ಅಧ್ಯಕ್ಷ ರಾವಸಾಬ್ ಮಾನೆ, ಪರಶುರಾಮ ಕೋಟೆವಾಲೆ ಉಪಸ್ಥಿತರಿದ್ದರು.
ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಜ್ಞಾನ ವಿಕಾಸ ಕೇಂದ್ರದ ಸದ್ಯಸರು, ಸ್ಥಳೀಯ ಸೇವಾ ಪ್ರತಿನಿಧಿಗಳು ಮತ್ತು ಗ್ರಾಹಕ ಸೇವಾ ಕೇಂದ್ರದ ಸೇವಾದಾರರು, ಕೇಂದ್ರದ ಹಾಗೂ ಪ್ರಗತಿ ಬಂಧು, ಸ್ವ-ಸಹಾಯ ಸಂಘದ ಸದ್ಯಸರು ಉಪಸ್ಥಿತರಿದ್ದರು. ಯೋಜನಾಧಿಕಾರಿ ಹರೀಶ್ ಪಾವಸ್ಕರ ಸ್ವಾಗತಿಸಿದರು. ಶಿರಗಾಂವ ವಲಯದ ಮೇಲ್ವಿಚಾರಕ ಆನಂದ್ ನಿರೂಪಿಸಿದರು. ತಾಲೂಕಿನ ಸಮನ್ವಯ ಅಧಿಕಾರಿ ಜ್ಯೋತಿ, ಗೋಪಾಲ ಕಿನ್ನಾಳ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 