ಚಿಕುನ್ಗುನ್ಯಾ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಂದ ಪರಿಶೀಲನೆ

ವಿಜಯಪುರ 31:   ವಿಜಯಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಚಿಕುನಗುಣ್ಯಾ ಪ್ರಕರಣ ಕಂಡು ಬಂದ ಹಿನ್ನೆಲಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಹೇಂದ್ರ ಕಾಪ್ಸೆ, ಡಾ.ಗುಣಾರಿ, ಡಾ.ಕೆ.ಡಿ.ಗುಂಡಬಾವಡಿ ಅವರು ಸದರಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಪಿಡಿಓಗಳು ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಅದರಂತೆ ನೀರಿನ ಮೂಲಗಳಿಗೆ ವಾರಕ್ಕೊಮ್ಮೆ ಕ್ಲೋರಿನೇಶನ್ ಮಾಡಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದರು.

                ಡಾ.ಕೆ.ಡಿ.ಗುಂಡಬಾವಡಿ ಅವರು, ಚಿಕುನಗುಣ್ಯಾ ರೋಗ ತಡೆಗಟ್ಟಲು ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸುತ್ತಮುತ್ತ ನೀರು ಕೊಳಚೆಯಾಗದಂತೆ ನೋಡಿಕೊಳ್ಳಬೇಕು. ಮನೆಯಲ್ಲಿ ಶೇಖರಿಸಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಪಾತ್ರೆಗಳನ್ನು ತೊಳೆದು ಮತ್ತೆ ನೀರು ತುಂಬಬೇಕು. ಚಿಕುನಗುನ್ಯಾ ಸೊಳ್ಳೆಗಳಿಂದ ಹರಡುವ ರೋಗವಾಗಿದ್ದು,ಎಲ್ಲಿಯೂ ಕಲುಷಿತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

                ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ-ಮನೆಗೆ ತೆರಳಿ ಚಿಕುನಗುನ್ಯಾ ರೋಗದ ಕುರಿತು ತಿಳುವಳಿಕೆ ನೀಡಿದರು.