ಬೆಂಗಳೂರು, ಜೂ.11,ಹಾಸನ ಜಿಲ್ಲೆಯ ಆಲೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಶಿವಕಿರಣ್ ಅವರ ನಿಧನದ ಸುದ್ದಿ ದುಃಖಕರ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಡಾ. ಶಿವಕಿರಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ತಡೆಯುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವೈದ್ಯರು ಹಾಗೂ ವೈದ್ಯೇತರ ಸಿಬ್ಬಂದಿ ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕಿರುವುದು ಅತಿ ಮುಖ್ಯ. ಎಲ್ಲ ಕೊರೊನ ಸೈನಿಕರ ಜತೆಗೆ ಇಲಾಖೆ ಸದಾ ಇರುತ್ತದೆ ಎಂದು ಅಭಯ ನೀಡಿದ್ದಾರೆ.