ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು: ನ್ಯಾ. ಉಂಡೋಡಿ

 ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು: ನ್ಯಾ. ಉಂಡೋಡಿ Child abuse must be prevented: Justice Undodi

ಲೋಕದರ್ಶನ ವರದಿ 

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು: ನ್ಯಾ. ಉಂಡೋಡಿ 


ಕಾರವಾರ, ಅ.13: ಪೋಷಕರು ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಂಡು, ತಮ್ಮ ಮಕ್ಕಳಿಗೆ  ಸರಿ ತಪ್ಪು ಕಾರ್ಯಗಳ ಕುರಿತು ಅರಿವು ಮೂಡಿಸುವುದರಿಂದ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ  ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಎಸ್ ಉಂಡೋಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. 

ಅವರು ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಭವನದಲ್ಲಿ ನಡೆದ ಬಾಲನ್ಯಾಯ ಕಾಯ್ದೆ-2015, ಪೋಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ2006 ಕುರಿತು ಭಾಗೀದಾರರಿಗೆ ಹಾಗೂ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.  

ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಪುರುಷ ಪ್ರಧಾನ ಸಮಾಜ ಎಂಬ ಭಾವನೆ ಇರುವುದರಿಂದ ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮನಸ್ಸಿನ ಮೇಲೆ ಹಿಡಿತವಿಲ್ಲದೆ ಇರುವುದರಿಂದ ಕೂಡಾ ದೌರ್ಜನ್ಯಗಳು ನಡೆಯುತ್ತಿವೆ. ಈ ದೌರ್ಜನ್ಯಗಳನ್ನು ತಡೆಗಟ್ಟಲು ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಈ ನಿಟ್ಟಿನಲ್ಲಿ ಅನುಷ್ಠಾನಾಧಿಕಾರಿಗಳು ಗ್ರಾಮ ಮಟ್ಟದಲ್ಲಿ ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಬಾಲ್ಯವಿವಾಹವನ್ನು ತಡೆಗಟ್ಟಬೇಕು ಎಂದರು. 

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಮಾತನಾಡಿ, ಕಾನೂನು ಪಾಲನೆ, ನೊಂದವರಿಗೆ ರಕ್ಷಣೆ ನೀಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಮರೆತರೆ ಸಮಾಜದ ಶತ್ರುಗಳಾಗಿ ಉಳಿಯುತ್ತೇವೆ. ಹಾಗಾಗಿ ನಮ್ಮ ಕರ್ತವ್ಯವನ್ನು ಪಾಲನೆ ಮಾಡಬೇಕು. ಪ್ರತಿಯೊಂದು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿಯೊಂದು ಮಗುವು ತಮ್ಮ ಮಕ್ಕಳೆಂದು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಇತ್ತೀಚಿಗೆ ಮಕ್ಕಳು ಅಪರಾಧ ಚಟುವಟಿಗಳಿಗೆ ತೊಡಗುವುದಕ್ಕಿಂತ ಬಲಿಪಶುಗಳಾಗುವುದೆ ಹೆಚ್ಚಾಗಿದೆ ಎಂದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಮಾತನಾಡಿ, ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪ್ರಾಪ್ತ ವಯಸ್ಸಿನಲ್ಲಿ ಮಕ್ಕಳು ಗರ್ಭಿಣೆಯರಾಗುತ್ತಿದ್ದಾರೆ. ಇವುಗಳನ್ನು ತಡೆಗಟ್ಟಲು ಈ ರೀತಿಯ ಪ್ರಕರಣಗಳು ಎಲ್ಲಿ ಹೆಚ್ಚಾಗಿ ಕಂಡು ಬರುತ್ತವೆ ಎಂಬುದನ್ನು ಪತ್ತೆ ಹಚ್ಚಿ ಆ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು. 

ಸಿಐಡಿ ವಿಭಾಗದ ರೋಹಿತ ಸಿ.ಜಿ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ  ಕುರಿತು ಉಪನ್ಯಾಸ ನೀಡಿದರು. 

ಕಾರ್ಯಕ್ರಮದಲ್ಲಿ ಪೋಕ್ಸೋ, ಬಾಲ್ಯ ವಿವಾಹ ನಿಷೇಧ, ಉಚಿತ ಮಕ್ಕಳ ಸಹಾಯವಾಣಿ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. 

ಕಾರ್ಯಾಗಾರದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ನೀರಜ್, ಡಿವೈಎಸ್ಪಿ ಗೀರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ ಮತ್ತಿತ್ತರರು ಇದ್ದರು. 


ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ 

ಕಾರವಾರ, ಅ.13: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್‌/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ "ಸೇವಾಸಿಂಧು" ಪೋರ್ಟಲ್ (ಣಣಠಿ:/ಜತಛಿಟಿಜಣ.ಞಚಿಡಿಟಿಚಿಣಚಿಞಚಿ.ರಠ.ಟಿ) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 

ಆನ್‌ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರೀಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.  

ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ "ಸೇವಾಸಿಂಧು" ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನ್ಯಾಯವಾದಿಗಳಿಂದ ಅರ್ಜಿ ಅಹ್ವಾನ. 

ಕಾರವಾರ, ಅ.13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರವಾರ (ಉ.ಕ)ದಲ್ಲಿ ರಚನೆಗೊಂಡ ಕಾನೂನು ನೆರವು ರಕ್ಷಣಾ ಸಲಹೆಗಾರ ವ್ಯವಸ್ಥೆ  ನಲ್ಲಿ ಕಾರ್ಯನಿರ್ವಹಿಸಲು ಮತ್ತು  ಆಜಠಿಣಣಥಿ ಐಜರಚಿಟ ಂಜ ಆಜಜಿಜಠಿಜ ಅಠಠಿಜಟ-3 ಹುದ್ದೆಗಳಿಗೆ ಅರ್ಹ ನ್ಯಾಯವಾದಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಜಿಲ್ಲಾ ನ್ಯಾಯಾಲಯದ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.  

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯ ನಮೂನೆಯನ್ನು ಪಡೆಯಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರವಾರ ಕಚೇರಿಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಕೊನೆಯ ಅ.25 ರೊಳಗಾಗಿ ಕಚೇರಿಯ ಅವಧಿಯೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಕಚೇರಿಗೆ ಸಲ್ಲಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಪ್ರಕಟಣೆಯಲ್ಲಿ ತಿಳಿಸದ್ದಾರೆ. 

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. 

ಕಾರವಾರ, ಅ.13 : ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅ. 18 ರಂದು ಬೆಳಿಗ್ಗೆ 11 ಗಂಟೆಗೆ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಮತ್ತಿತರರು ಭಾಗವಹಿಸಲಿದ್ದು, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಕ್ಷರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.  

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಸುಮಾರು 300 ಕ್ಕೂ  ಹೆಚ್ಚು ಮಕ್ಕಳಿಗೆ ಮಕ್ಕಳನ್ನು ಗೌರವಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ನೌಕರರು ಭಾಗವಹಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕುಮಾರ ಎಸ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ 

ಕಾರವಾರ, ಅ.13: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅ.27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.  

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. 

ಆಸಕ್ತಿಯುಳ್ಳ ಅಭ್ಯರ್ಥಿಗಳು ಅ.27 ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 9591514154, 9686248369 ಅನ್ನು  ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹೊನ್ನಾವರ: ವಿದ್ಯುತ್ ವ್ಯತ್ಯಯ 

ಕಾರವಾರ, ಅ.13: ಹೊನ್ನಾವರ ತಾಲೂಕಿನ ಪ ಟ್ಟಣ ಶಾಖೆಯ ಎಲ್‌.ಐ.ಸಿ, ಫೀಡರ್ ವ್ಯಾಪ್ತಿಯಲ್ಲಿ ಹಾಘೂ ಗೇರುಸೊಪ್ಪ ಶಾಖಾ ವ್ಯಾಪ್ತಿಯ ಮಾಗೋಡ ಫೀಡರ್ ವ್ಯಾಪ್ತಿಯಲ್ಲಿ 11 ಕೆ.ವಿ ಮಾರ್ಗದ ನಿರ್ವಹಣೆಯ ಕೆಲಸದ ನಿಮಿತ್ತ ಅ.15 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪ-ವಿಭಾಗದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕುಮಟಾ: ವಿದ್ಯುತ್ ವ್ಯತ್ಯಯ 

     ಕಾರವಾರ, ಅ.13:  ಹೆಸ್ಕಾಂ, ಕುಮಟಾ ಉಪವಿಭಾಗದ ನಗರ ಶಾಖೆಯ ವ್ಯಾಪ್ತಿಯ 11ಕೆ.ವಿ ಇಂಡಸ್ಟ್ರೀಯಲ್ ಮಾರ್ಗದಲ್ಲಿ ಐ.ಆರ್‌.ಬಿ ರವರ ಲೈನ್ ಕಾಮಗಾರಿ ಹಾಗೂ 11ಕೆ.ವಿ ಚಿತ್ರಗಿ ಭಾಗದಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ, ಅ.15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ  ಮತ್ತು ಗ್ರಾಮೀಣ ಶಾಖೆಯ ವ್ಯಾಪ್ತಿಯ 11ಕೆ.ವಿ ಮಿರ್ಜಾನ್ ಫೀಡರಿನ ಮಾರ್ಗದಲ್ಲಿ ಮತ್ತು 11ಕೆ.ವಿ ಕತಗಾಲ್ ಮಾರ್ಗದ ದಿವಗಿ ಹತ್ತಿರ ಹೊಸ 11ಕೆ.ವಿ ಮಾರ್ಗವನ್ನು ನಿರ್ಮಿಸುವ ಕಾರ್ಯವಿರುವುದರಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ ಸ ಗಂಟೆಯವರೆಗೆ ಮತ್ತು ಗೋಕರ್ಣ ಶಾಖೆಯ 11ಕೆ.ವಿ ಮಾದನಗೇರಿ, 11ಕೆ.ವಿ ಬಿಜ್ಜೂರ ಮತ್ತು 11ಕೆ.ವಿ ಗಂಗಾವಳಿ ಮಾರ್ಗಗಳ ಜಂಗಲ್ ಕಟ್ಟಿಂಗ್ ಕಾರ್ಯವಿರುವುದರಿಂದ ಬೆಳಗ್ಗೆ  10ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ 33/11ಕೆ.ವಿ ಮರಾಕಲ್ ಮಾರ್ಗದಲ್ಲಿ ಜಂಗಲ್ ಕಟ್ಟಿಂಗ್ ಕಾಮಗಾರಿ ಇರುವುದರಿಂದ ಬೆಳಗ್ಗೆ  10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಕುಮಟಾ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.