ಕೊಪ್ಪಳ 17: ಬಾಲ್ಯ ವಿವಾಹ, ಬಾಲ ಕಾಮರ್ಿಕ ಪದ್ಧತಿ ನಿಮರ್ೂಲನೆ, ಸಕರ್ಾರಿ ಶಾಲೆಗಳ ಉನ್ನತೀಕರಣ ಮತ್ತು ಹಳೇ ವಿದ್ಯಾಥರ್ಿ ಸಂಘಗಳ ಬಲವರ್ಧನೆ ಹಾಗೂ ಸ್ವಚ್ಛ ಭಾರತ್ ಆಂದೋಲನ್ ಕುರಿತು ಕೊಪ್ಪಳ ನಗರದಲ್ಲಿ ಗುರುವಾರದಂದು ಆಯೋಜಿಸಲಾದ ಜಾಗೃತಿ ಜಾಥಕ್ಕೆ ಗವಿಸಿದ್ಧೇಶ್ವರ ಸ್ವಾಮಿಗಳು ಚಾಲನೆ ನೀಡಿದರು.
ಜಾಥಾ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಮರ್ಿಕ ಇಲಾಖೆ, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಕಂಪನಿಗಳ ಸಹಯೋಗದಲ್ಲಿ ಶ್ರೀಗವಿಮಠದ ಆವರಣದಲ್ಲಿ ಆಯೋಜಿಸಲಾಗಿತ್ತು.
ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನೀತಾ ತೊರವಿ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಈರಣ್ಣ ಪಂಚಾಳ್, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣ ಯೋಜನೆಯ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ, ವಾತರ್ಾ ಇಲಾಖೆಯ ಎಂ. ಅವಿನಾಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿದ್ದು ಡಿ. ಎಲಿಗಾರ, ಸಂದಿಗ್ಧ ಚಲನಚಿತ್ರದ ನಿದರ್ೇಶಕ ಸುಚಿಂದ್ರ ಪ್ರಸಾದ, ಚಿತ್ರನಟ ಮಹೇಶ ದೇವು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಜಾಗೃತಿ ರ್ಯಾಲಿಯು ಗವಿಮಠದಿಂದ ಪ್ರಾರಂಭಗೊಂಡು ಗಡಿಯಾರ ಕಂಬ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದ ವರೆಗೆ ಯಶಸ್ವಿಯಾಗಿ ಜರುಗಿತು. ಜಾಥಾ ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತಾ ಮತ್ತು ಕಹಳೆ ವಾದನ ಕಲಾ ತಂಡಗಳು ಭಾಗವಹಿಸಿದ್ದು, ಆಕರ್ಷಕ ಪ್ರದರ್ಶನವನ್ನು ನೀಡಿದರು. ಅಲ್ಲದೇ ಶಾಲಾ ಕಾಲೇಜುಗಳ ವಿದ್ಯಾಥರ್ಿಗಳು ಸಹ ರ್ಯಾಲಿಯಲ್ಲಿ ಪಾಲ್ಗೋಂಡು "ಬಾಲ್ಯ ವಿವಾಹ, ಬಾಲ ಕಾಮರ್ಿಕ ಪದ್ಧತಿ ನಿಮರ್ೂಲನೆ, ಸಕರ್ಾರಿ ಶಾಲೆಗಳ ಉನ್ನತೀಕರಣ ಮತ್ತು ಹಳೇ ವಿದ್ಯಾಥರ್ಿ ಸಂಘಗಳ ಬಲವರ್ಧನೆ ಹಾಗೂ ಸ್ವಚ್ಛ ಭಾರತ್ ಕುರಿತಾದ ಜಾಗೃತಿ ಫಲಕಗಳನ್ನು ಪ್ರದಶರ್ಿಸಿ, ಘೋಷಣೆಗಳನ್ನು ಕೂಗುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.