ಕೊಪ್ಪಳ 28: ಬಾಲ್ಯ ವಿವಾಹ ಕಾಯ್ದೆಯ ಕುರಿತು ಅರಿವಿದ್ದರು ಸಹ ಇನ್ನೂ ಕೆಲವು ಕಡೆ ಬಾಲ್ಯ ವಿವಾಹಗಳು ನಿಂತಿಲ್ಲ ಇದು ವಿಷಾದನೀಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಕೆ. ದಯಾನಂದ ಅವರು ಹೇಳಿದರು.
ಜಿಲ್ಲಾ ಪಂಚಾಯತನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು (ನ.28) ನಡೆದ "ಬಾಲ್ಯ ವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿಭಾಗೀಯ ಮಟ್ಟದ ಸಾಮಥ್ಯರ್ಾಭಿವೃದ್ಧಿ ಕಾಯರ್ಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಜಾರಿ ಉದ್ದೇಶಕ್ಕಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ಹಿಡಿದು ವಿವಿಧ ಹಂತಗಳಲ್ಲಿ 5000 ಅಧಿಕಾರಿಗಳನ್ನು ನೇಮಕ ಮಾಡಿದೆ. ಹೆಣ್ಣು ಮಕ್ಕಳಿಗೆ 18 ವರ್ಷವಾದ ಮೇಲೆ ಮಾನಸಿಕ, ದೈಹಿಕ ಮತ್ತು ಮೂಲಭೂತ ಬದುಕುವ ಶಕ್ತಿಯನ್ನು ಪಡೆದುಕೊಳ್ಳುತ್ತಾರೆ. ಇಂದಿನ ಆಧುನಿಕ ಯುಗದಲ್ಲಿ ಒಬ್ಬ ವಿದ್ಯಾರ್ಥಿ ತನ್ನ ಶೈಕ್ಷಣಿಕ ವಿಧ್ಯಾಭ್ಯಾಸವನ್ನು ಮುಗಿಸುವುದಕ್ಕೆ ಕನಿಷ್ಠ 25 ವರ್ಷ ಬೇಕು. ಅಂತಹದರಲ್ಲಿ ಹೆಣ್ಣು ಮಕ್ಕಳನ್ನು ಪೋಷಕರು, ಸಂಬಂಧಿಕರು ಬಾಲ್ಯ ವಿವಾಹಕ್ಕೆ ದೂಡಬಾರದು. ಅವರ ಬಾಲ್ಯಾವಸ್ಥೆಯನ್ನು ನೀವೇ ಹಾಳು ಮಾಡಿದಂತಾಗುತ್ತದೆ ಎಂದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಬಾಲ್ಯ ವಿವಾಹಗಳು ನಿಲ್ಲುತ್ತಿಲ್ಲ. ಆಥರ್ಿಕ, ಸಾಮಾಜಿಕ ಕಾರಣಗಳನ್ನು ಇಟ್ಟುಕೊಂಡು ಮಹಿಳೆಯನ್ನು ಅನೈತಿಕ ಚಟುವಟಿಕೆಗೆ ದೂಡುತ್ತಿರುವುದು ಬಹಳ ವಿಷಾದನೀಯ. ಆಥರ್ಿಕ ಲಾಭಕ್ಕಾಗಿ ಭಿಕ್ಷಾಟನೆಗೆ ತಳ್ಳುವುದು, ಅನೈತಿಕ ಕೆಲಸಕ್ಕೆ ದೂಡುವುದು, ಅಕ್ರಮ ಸಾಗಾಣಿಕೆ ಮುಂತಾದವು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಉದಾಹರಣೆಗಳು. ಅವರ ಸುತ್ತಮುತ್ತಲಿನ ಜನರಿಗೆ ಮಹಿಳೆಯನ್ನು ಭಿಕ್ಷಾಟನೆಗೆ ತಳ್ಳುತ್ತಿರುವುದು ತಿಳಿದು ಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ. ಅದನ್ನು ತಡೆಯುವುದಕ್ಕೆ ಕಾನೂನು, ಕಾಯ್ದೆಗಳು ಇವೆ. ಪ್ರತಿಯೊಬ್ಬ ಮನುಷ್ಯನಿಗೆ ಕಾನೂನಿನ ಅರಿವು ಉಂಟಾದರೆ ಸುತ್ತಮುತ್ತಲಿನವರ ಚಲನವಲವನ್ನು ತಿಳಿದುಕೊಳ್ಳಲು ಸಾಧ್ಯ. ಮನುಷ್ಯನ ಮನಸ್ಥಿತಿ ಚೆನ್ನಾಗಿದ್ದರೆ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬಹುದು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಬಾಲ್ಯ ವಿವಾಹದಲ್ಲಿ ತಂದೆ-ತಾಯಿಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಮಕ್ಕಳಿಗೆ ಬೇಟಿ ಬಚಾವೊ ಬೇಟಿ ಪಡಾವೊ, ಮಕ್ಕಳ ಗ್ರಾಮ ಸಭೆ ಯಂತಹ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹದ ಬಗ್ಗೆ ಮತ್ತು ಕಾಯ್ದೆ ಬಗ್ಗೆ ಅರಿವನ್ನು ಮೂಡಿಸಬೇಕು. ಸ್ವ-ಸಹಾಯ ಗುಂಪು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಲ್ಯ ವಿವಾಹದ ಕುರಿತು ಜಾಗೃತಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಾಲ್ಯ ವಿವಾಹ ಕಾಯ್ದೆ-2006ರ ಬಗ್ಗೆ ಮಾಹಿತಿಯನ್ನು ತಿಳಿಸಬೇಕು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 58 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಅವುಗಳ ಕುರಿತು ಕಾನೂನು ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಬಾಲ್ಯ ವಿವಾಹದ ಕುರಿತು ಪಾಲಕರಿಗೆ ತಿಳಿವಳಿಕೆಯನ್ನು ನೀಡಿ, ಬಾಲ್ಯ ವಿವಾಹ ಪದ್ಧತಿಯನ್ನು ನಿಲ್ಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ (ಡಿಸಿಎಂ)ಕೆ. ಎಂ. ರೇವತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕರಾದ ಈರಣ್ಣ ಪಂಚಾಳ್, ಕೊಪ್ಪಳ ಬಾಲ ನ್ಯಾಯ ಮಂಡಳಿ ಸದಸ್ಯ ಶೇಖರಗೌಡ ಜಿ. ರಾಮತ್ನಾಳ, ಕೊಪ್ಪಳ ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಭಾಗೀಯ ಸಂಯೋಜಕರಾದ ರಾಘವೇಂದ್ರ ಭಟ್, ರಾಯಚೂರು, ಬಳ್ಳಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.