ಮಕ್ಕಳಿಲ್ಲದವರು ವಿಶೇಷ ದತ್ತು ಕೇಂದ್ರದಿಂದ ಮಗು ದತ್ತು ಸ್ವೀಕರಿಸಲು ಸಲಹೆ: ಡಾ.ಆನಂದ.ಕೆ
Childless people advised to adopt a child from a special adoption center: Dr. Anand K.
ಲೋಕದರ್ಶನ ವರದಿ
ವಿಜಯಪುರ ಮಾರ್ಚ್.31: 0-6 ವರ್ಷದೊಳಗಿನ ಅನಾಥ ಪ್ರತಿ ಮಗುವನ್ನು ಕೌಟುಂಬಿಕ ಪರಿಸರದಲ್ಲಿ ಬೆಳೆಸಿ ಉತ್ತಮ ಪ್ರಜೆಯಾಗಿಸುವ ನಿಟ್ಟಿನಲ್ಲಿ ದತ್ತು ಪೋಷಕರು, ಏಕಪಾಲಕರು ವಿಶೇಷ ದತ್ತು ಕೇಂದ್ರದ ಮೂಲಕ ಮಗುವನ್ನು ದತ್ತು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.
ನಗರದ ಟಕ್ಕೆಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಹೊಸ ಸರ್ಕಾರಿ ದತ್ತು ಸಂಸ್ಥೆಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿಯ ಅನಾಥ ಹಾಗೂ ಒಪ್ಪಿಸಿದ ಮಕ್ಕಳನ್ನು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ದತ್ತು ಮಾರ್ಗಸೂಚಿ-2017ರನ್ವಯ ಕಾನೂನಾತ್ಮಕವಾಗಿ ದತ್ತು ಪಡೆಯಲು ಅವಕಾಶವಿದ್ದು, ಮಕ್ಕಳಿಲ್ಲದವರು, ಇಲ್ಲಿನ ಮಕ್ಕಳನ್ನು ದತ್ತು ಸ್ವೀಕರಿಸಬಹುದಾಗಿದೆ ಎಂದರು.
ಇನ್ನೊಂದೆಡೆ ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಸರ್ಕಾರಿ ದತ್ತು ಸಂಸ್ಥೆಯಲ್ಲಿ ದಾಖಲಿಸಬಹುದು. ಮಕ್ಕಳಿಲ್ಲದ ಅಥವಾ ಮಕ್ಕಳನ್ನು ಹೊಂದಿದವರು, ಆಸ್ಪತ್ರೆಯಲ್ಲಿ, ಯಾವುದೇ ಪ್ರದೇಶದಲ್ಲಿ ಬಿಟ್ಟು ಹೋದ ಮಕ್ಕಳನ್ನು ಅಥವಾ ಯಾವುದೇ ಕಾರಣದಿಂದ ಯಾವುದೇ ಪೋಷಕರಿಂದ ಮಗುವನ್ನು ನೇರವಾಗಿ ಪಡೆಯುವುದು ಕಾನೂನು ಪ್ರಕಾರ ಅಪರಾಧವಾಗಿದೆ ಎಂದ ಅವರು, ಅದಕ್ಕೆ ಕಠಿಣ ಶಿಕ್ಷೆಯನ್ನು ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ನಿರ್ಮಲಾ ಎಚ್. ಸುರಪುರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಎಸ್. ಜಾನಕಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಬಸಮ್ಮ ಹತ್ತರಕಿ, ಬಾಲಕರ ಬಾಲಮಂದಿರ ಕಿರಿಯ ಸಂಸ್ಥೆಯ ಅಧಿಕ್ಷಕಿ ಜಯಶ್ರೀ ಪವಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 