ಮಕ್ಕಳ ದಿನಾಚರಣೆ : ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ
Children's Day: Award ceremony for winners of various competitions
ಧಾರವಾಡ 14: ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಜಿಲ್ಲಾ ಬಾಲಭವನ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ (ನ.12) ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಸ್ಪರ್ಧೆ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ, ಯೋಗ, ನೃತ್ಯ, ಮ್ಯಾಜಿಕ್, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ವಿವಿಧ ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು.
ಸ್ಪರ್ಧೆಯಲ್ಲಿ 09 ರಿಂದ 16 ವರ್ಷದ ಸುಮಾರು 155 ಮಕ್ಕಳು ಭಾಗವಹಿಸಿದ್ದರು. ಸೃಜನಾತ್ಮಕ ಕಲೆಯ ತಿರ್ುಗಾರರಾಗಿ ಭಾರತೀಯ ಕಲಾ ಕೇಂದ್ರ ಶಿಕ್ಷಕ ಎನ್.ಆರ್. ನಾಯ್ಕರ, ಕರ್ನಾಟಕ ವಿಶ್ವವಿದ್ಯಾಲಯ ಚಿತ್ರಕಲಾ ಪ್ರಾಧ್ಯಾಪಕ ವೆಂಕಟೇಶಕುಮಾರ ಎಚ್.ಕೆ, ಸೃಜನಾತ್ಮಕ ಬರವಣಿಗೆ ತಿರ್ುಗಾರರಾಗಿ ಸಾಹಿತಿ ಮಾರ್ತಾಂಡಪ್ಪ ಕತ್ತಿ, ಶಿಕ್ಷಕ ಕೆ.ಪಿ ಶೇಖರ ಮತ್ತು ಸೃಜನಾತ್ಮಕ ಪ್ರದರ್ಶನ ಕಲೆಯ ತಿರ್ುಗಾರರಾಗಿ ನೃತ್ಯ ಶಿಕ್ಷಕ ಸೈಯದ್ ಎ.ಎಮ್, ಭರತನಾಟ್ಯ ಯಕ್ಷಗಾನ ಶಿಕ್ಷಕಿ ನಿಧಿ ಶೆಟ್ಟಿ ಅವರು ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಫರ್ಧೆಯ ತಿರ್ುಗಾರರಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಸುಧೀನ ಎಚ್.ಕೆ. ಹಾಗೂ ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಶಿಕ್ಷಕಿ ನೀಲಾಂಬಿಕಾ ಕಿರಣ್ ಶೆಟ್ಟರ ಅವರು ಆಗಮಿಸಿದ್ದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅ. ಬಬಲೇಶ್ವರ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಇಲಾಖೆಯು ಮಕ್ಕಳಿಗಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಈ ಕಾರ್ಯಕ್ರಮಗಳನ್ನು ಮಕ್ಕಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಸರ್ಕಾರವು ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸುವಂತೆ ಕ್ರಮ ವಹಿಸಲು ಸೂಚಿಸಿದರು. ಮುಖ್ಯ ಅತಿಥಿಗಳಾಗಿದ್ದ ಮಲ್ಲಿಕಾರ್ಜುನ ಚಿಕ್ಕಮಠ ಅವರು ಮಾತನಾಡಿ, ಮಕ್ಕಳು ತಮ್ಮ ಪ್ರತಿಭೆಯನ್ನು ವ್ಯಕ್ತ ಪಡಿಸುವುದೇ ಗೆಲುವು, ಸೋಲನ್ನು ಒಪ್ಪಿಕೊಳ್ಳುವುದು ಎಂದರೆ, ಮನೋಬಲವನ್ನು ಕುಗ್ಗಿಸಿದ ಹಾಗೇ, ಅದೇ ಸೋಲಿನ ಮನೋಬಲವನ್ನು ಗಟ್ಟಿಗೊಳಿಸಿಕೊಂಡಾಗ ಮಾತ್ರ ಗೆಲುವಿನ ಮೆಟ್ಟಿಲು ಮುಟ್ಟಲು ಸಾಧ್ಯ ಎಂದು ಎಲ್ಲ ಮಕ್ಕಳು ದೃಢ ವಿಶ್ವಾಸ ಬೆಳಸಿಕೊಳ್ಳುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್ ಕುಕನೂರ ಅವರು ಮಾತನಾಡಿ, ಪ್ರತಿ ವರ್ಷವೂ ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗೆ ಸ್ಪರ್ಧೆಗಳನ್ನು ಏರಿ್ಡಸಿ ವಿಜೇತ ಮಕ್ಕಳನ್ನು ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗುವುದು. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಇಂತಹ ಅವಕಾಶಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಸ್ಪರ್ಧೇಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಪ್ರಶಂಸನಾ ಪತ್ರ ವಿತರಿಸಲಾಯಿತು.
ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳ ವಿವರ: ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ಪರಶುರಾಮ ದುರ್ಗಪ್ಪ ದುರ್ಗಮುರ್ಗಿ - ಪ್ರಥಮ, ರೇಣುಕಾ ಮುರ್ಖಾನಿ - ದ್ವಿತೀಯ, ಅಭಿನವರಾವ ಎಮ್.ದೇಸಾಯಿ -ತೃತೀಯ. ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಶಿವಲೀಲಾ ಹಿರೇಮಠ - ಪ್ರಥಮ, ಈರಮ್ಮ ತಳವಾರ - ದ್ವಿತೀಯ, ವೈಷ್ಣವಿ ಹುಡೇದಮನಿ -ತೃತೀಯ. ಸೃಜನಾತ್ಮಕ ಪ್ರದರ್ಶನ ಸ್ಪರ್ಧೆಯಲ್ಲಿ ಸಿರಿಗೌರಿ ಬಾಲೇರಾವ - ಪ್ರಥಮ, ಆಯಿಷಾ ಅತ್ತಾರ - ದ್ವಿತೀಯ, ರಾಘವ ದೇಸಾಯಿ ಹಿ ತೃತೀಯ. ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಯಲ್ಲಿ ಶ್ರೇಯಸ್ ಚೌಗಲ - ಪ್ರಥಮ, ಆದರ್ಶ ರವಿ ಹಡಗಲಿ - ದ್ವಿತೀಯ, ಸುಹಾಸ್ ಚೌಗಲೆ ಹಿ ತೃತೀಯ. ಅಂಗವಿಕಲ ಮತ್ತು ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ಮಂಜುನಾಥ ಇಟಗಿ - ಪ್ರಥಮ ವಿರೇಶ ರಾಠೋಡ - ದ್ವಿತೀಯ, ಶ್ರೇಯಸ್ ಬೇವಿನಕಟ್ಟಿ - ತೃತೀಯ ನೃತ್ಯ ಪ್ರತಿಭಾ ಹೆಬ್ಬಳ್ಳಿ ಪ್ರಥಮ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಮತ್ತು ಪೋಷಕರು, ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 