ರೆಡ್ಡಿ ವೀರಣ್ಣ ಶಾಲೆಯಲ್ಲಿ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ
Children's Day celebrated meaningfully at Reddy Veeranna School
ರೆಡ್ಡಿ ವೀರಣ್ಣ ಶಾಲೆಯಲ್ಲಿ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ
ಕಾರಟಗಿ 15: ಕಮ್ಮವಾರಿ ಶಿಕ್ಷಣ ಸಂಸ್ಥೆ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಬೇಬಿ ಕ್ಲಾಸ್ ಎಲ್ ಕೆ ಜಿ, ಯು ಕೆ ಜಿ, ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಕಾಂಪಿಟೇಶನ್ 6ನೇ ತರಗತಿ ವಿದ್ಯಾರ್ಥಿಗಳಿಗೆ ಆಹಾರಮೇಳ, ವೆಜಿಟೇಬಲ್ ಅಂಡ್ ಫ್ರೂಟ್ ಕಾರ್ವಿಂಗ್, ಇನ್ನು ವಿವಿಧ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು,ಈ ವೇಳೆ ಸಂಸ್ಥೆಯ ಅಧ್ಯಕ್ಷರ ಶೇಷಗಿರಿರಾವ್ ಕೊಲ್ಲಾ ಮಾತನಾಡಿ ಇಂತಹ ಆಹಾರ ಮೇಳವನ್ನು ಆಯೋಜನೆ ಮಾಡುವುದರಿಂದಾಗಿ ವಿದ್ಯಾರ್ಥಿಗಳಲ್ಲಿ ವ್ಯಾಪಾರ ವ್ಯವಹಾರದ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದಂತಾಗುತ್ತದೆ ಎಂದು ತಿಳಿಸಿದರು.ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮನೆಯಲ್ಲಿ ತಯಾರಿಸಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದರಲ್ಲಿ ಉತ್ಸಾಹ ತೋರಿದರು.ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಶ್ರೀಮನ್ ನಾರಾಯಣ, ಡಾ ಮೊಹಮ್ಮದ್ ರಫೀಕ್ ಪ್ರಾಚಾರ್ಯರು, ಶ್ರೀದೇವಿ ಕೊಲ್ಲಾ ಶಾಲೆಯ ಮುಖ್ಯಸ್ಥರು, ಸಾಜಿದ ಬೇಗಂ, ಶಿಕ್ಷಕ ವೃಂದ ಪಾಲಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 