ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ
Children's Day celebration at Maharana Pratap Simha Educational Institute
ಬೆಟಗೇರಿ 14: ನಗರದ ಮಹಾರಾಣಾಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇಂದು ಬೆಳಿಗ್ಗೆ ಪಂಡಿತ ಜವಹಾರಲಾಲ ನೆಹರುರವರ ಜಯಂತಿಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಯಿತು.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕರಿಗಳಾದ ಗಣೇಶಸಿಂಗ ಬ್ಯಾಳಿಯವರು ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತಾ ಪಂಡಿತ ಜವಹಾರಲಾಲ ನೆಹರುರವರು ಸ್ವಾತಂತ್ರ್ಯ ದೊರೆತ ನಂತರ ಪ್ರಪ್ರಥಮ ಪ್ರಧಾನ ಮಂತ್ರಿಗಳಾಗಿ ತಮ್ಮ ನಿಸ್ವಾರ್ಥ ಸೇವೆಯಿಂದ ದೇಶವನ್ನು ಮುನ್ನಡೆಸಿಕೊಂಡು ಹೋಗುವುದಲ್ಲದೆ ಅವರಿಗೆ ಮಕ್ಕಳ ಮೇಲೆ ಅಪಾರವಾದ ಪ್ರೀತಿ ಇತ್ತು. ಅವರಿಗೆ ಅತೀ ಪ್ರಿಯವಾದದ್ದು ಮಕ್ಕಳು ಹಾಗೂ ಗುಲಾಬಿ ಹೂ. ಮಕ್ಕಳು ಅವರನ್ನು ಪ್ರೀತಿಯಿಂದ ಚಾಚಾ ನೆಹರು ಎಂದೇ ಕರೆಯುತ್ತಿದ್ದರು. ತಮ್ಮ ಬಿಡಿವಿನ ವೇಳೆಯಲ್ಲಿ ಮಕ್ಕಳೊಂದಿಗೆ ಬೆರೆತು ಮಕ್ಕಳೇ ಆಗಿ ಬಿಡುತ್ತಿದ್ದರು ಎಂದು ಅವರ ಸಿಹಿ ನೆನಪುಗಳನ್ನು ಹಂಚಿಕೊಳ್ಳುತ್ತಾ ಶಾಲಾ ಮುದ್ದು ಮಕ್ಕಳಿಗೆ ವಿಶೇಷವಾಗಿ ಗುಲಾಬಿ ಹೂ ಹಾಗೂ ಸಿಹಿಯನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾದ ಎಸ್.ಎಸ್.ಬಡಿಗೇರ, ಪ್ರಾಚಾರ್ಯರಾದ ಎಸ್.ಎಂ.ಉಳ್ಳಾಗಡ್ಡಿ, ಸಮಸ್ತ ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು. ಮಕ್ಕಳು ಹಿಂದೂ ಸಂಪ್ರದಾಯದ ಬಣ್ಣ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 