ಕಂಪ್ಲಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಬಾಲ ಮೇಳ ಕಾರ್ಯಕ್ರಮ : ನಕ್ಕು ನಲಿದಾಡಿದ ಚಿಣ್ಣರು
Children's fair organized by the Women and Child Development Department in Kampli: Children were del
ಲೋಕದರ್ಶನ ವರದಿ
ಕಂಪ್ಲಿ 18: ಪಟ್ಟಣದ ಐತಿಹಾಸಿಕ ಸೋಮಪ್ಪನ ದೇವಸ್ಥಾನ ಮುಂಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಕಂಪ್ಲಿ ಸಿರುಗುಪ್ಪ ಹಾಗೂ ಅಜೀಂಪ್ರೇಮ್ ಜಿ ಫೌಂಡೇಷನ್ ಕಂಪ್ಲಿ ಇವರ ಸಹಯೋಗದಲ್ಲಿ ಕಂಪ್ಲಿ ಪಟ್ಟಣದ ಎ ಮತ್ತು ಬಿ ವಲಯಗಳು ಅರಳಿಬಾಲ್ಯ-ಬೆಳಗಲಿ ಭವಿತವ್ಯ ಘೋಷ ವಾಕ್ಯದಡಿಯಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು.
ಕಾರ್ಯಕ್ರಮವನ್ನು ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಲತೀಫಾ ಬೇಗಂ ಉದ್ಘಾಟಿಸಿ ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ಕಿರಿಯ ಪ್ರಾಥಮಿಕ ಹಂತದ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಆಟಗಳ ಮೂಲಕ ಸಂತೋಷಮಯ ವಾತಾವರಣದಲ್ಲಿ ನೀಡಲಾಗುತ್ತಿದೆ. ಆಟಿಕೆಗಳ ಮೂಲಕ, ವಿವಿಧ ಬಣ್ಣಗಳು, ಕೃತಕ ಗಿಡಗಳ ಮೂಲಕ ಮಕ್ಕಳಿಗೆ ಸಾಮಾನ್ಯ ಜ್ಞಾನವನ್ನು ತಿಳಿಸಿಕೊಡಲಾಗುತ್ತದೆ.ಮಕ್ಕಲ ನೆನಪಿನ ಶಕ್ತಿಯನ್ನು ಹೆಚ್ಚಿಸಲಾಗುತ್ತದೆ.ಜೊತೆಗೆ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ವಸ್ತುಗಳನ್ನು ನೋಡಿದ ತಕ್ಷಣವೇ ಅದರ ಬಗ್ಗೆ ಮಾಹಿತಿ ನೀಡುತ್ತವೆ ಈ ರೀತಿಯಲ್ಲಿ ಮಕ್ಕಳಿಗೆ ಕಲಿಸಲಾಗುತ್ತದೆ ಎಂದರು.
ನಂತರ ಮಕ್ಕಳಿಗೆ ವೇದಿಕೆಯಲ್ಲಿ ಮಕ್ಕಳಿಂದ ವಿವಿಧ ಪ್ರದರ್ಶನಗಳನ್ನು ಪ್ರದರ್ಶನ ಮಾಡಿದರು. ಬಾಲ ಮೇಳದಲ್ಲಿ ಕಂಪ್ಲಿ ಎ ಮತ್ತು ಬಿ ವಲಯದ ಅಂಗನವಾಡಿ ಕೇಂದ್ರಗಳ ಮಕ್ಕಳು ವಿವಿಧ ಪ್ರದರ್ಶನ ನೀಡುವ ಜೊತೆಗೆ ಆಕರ್ಷಕ ನೃತ್ತ ಪ್ರದರ್ಶನಗಳನ್ನು ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಆಜೀಂ ಪ್ರೇಮ್ ಜಿ ಫೌಂಡೇಷನ್ ರಾಘವೇಂದ್ರ ಮತ್ತು ಸಿಬ್ಬಂದಿಗಳು, ಎರಡು ವಲಯಗಳ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು, ಮಕ್ಕಳ ಪೋಷಕರು ಭಾಗವಹಿಸಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 