ಮಕ್ಕಳಿಗೆ ಕೇವಲ ಪಾಠದಿಂದ ಬದುಕು ರೂಪಗೊಳ್ಳದು: ಗೊಂಡಬಾಳ
Children's lives are not shaped by lessons alone: Gondabala
ಕೊಪ್ಪಳ 31: ಮಕ್ಕಳು ತಮ್ಮ ಶಾಲಾ ಕಾಲೇಜು ಶಿಕ್ಷಣದೊಂದಿಗೆ ಇತರೆ ಪಠ್ಯೇತರ ಚಟುವಟಿಕೆಗಳು ಮತ್ತು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಮಾತ್ರ ಚೈತನ್ಯಯುತ ಬದುಕು ರೂಪಗೊಳ್ಳುತ್ತದೆ ಎಂದು ಬಾಲಕರ ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಅನಿಸಿಕೆ ವ್ಯಕ್ತಪಡಿಸಿದರು.
ಅವರು ನಗರದ ಬಾಲಕರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಈಚೆಗೆ ಸ್ವಲ್ಪಮಟ್ಟಿನ ಕ್ರೀಡಾ ಉತ್ಸಾಹ ಬರುತ್ತಿದೆ, ಮಕ್ಕಳು ಕಾಲೇಜು ಹಂತದಲ್ಲಿ ಕ್ರೀಡೆಗೆ ಆದ್ಯತೆ ನೀಡಲು ಸಾಧ್ಯವಾಗುತ್ತಿಲ್ಲ, ಇಲಾಖೆ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸಬೇಕು, ಅದಕ್ಕೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಮಕ್ಕಳು ಇಂದು ಮೊಬೈಲ್ ಗೀಳಿಗೆ ಬಿದ್ದಿದ್ದು, ಮೋಬೈಲ್‌ನಲ್ಲಿಯೇ ಕ್ರೀಡೆಯಲ್ಲಿ ತೊಡಗಿ ಲಕ್ಷಾಂತರ ರುಪಾಯಿ ಹಾನಿ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ದೈಹಿಕವಾಗಿ ದುರ್ಬಲಗೊಳ್ಳುತ್ತಿದ್ದಾರೆ. ಕೇವಲ ಶಿಷ್ಟಾಚಾರಕ್ಕೆ ಕ್ರೀಡಾಕೂಟ, ಪಠ್ಯೇತರ ಚಟುವಟಿಕೆ ಎನ್ನುವಂತಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯ ಹೆಚ್. ಎಸ್. ದೇವರಮನಿ ಅಧ್ಯಕ್ಷತೆವಹಿಸಿದ್ದರು, ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ವೀರಶೇಖರ ಪತ್ತಾರ, ಗವಿಸಿದ್ಧಪ್ಪ ದೊಡ್ಡಮನಿ, ಪತ್ರೆಪ್ಪ ಛತ್ತರಕಿ, ವೆಳ್ಳಿಮಾ, ಸುದಿಂದ್ರರಾವ್ ಕುಲಕರ್ಣಿ, ಡಾ. ಸಿದ್ಧಲಿಂಗಪ್ಪ ಕೊಟ್ನೆಕಲ್, ಎಸ್. ಎ. ರಜಪೂತ, ಕೃಷ್ಣರಾವ್ ದೇಸಾಯಿ, ಬಸವನಗೌಡ ಗೌಡ್ರ, ಜ್ಯೋತಿ ಹಿರೇಮಠ, ಸೈಯದ್ ಸಾದತ್ ಅಲಿ ಇದ್ದರು. ತಾಲೂಕಿನ 30 ಕಾಲೇಜುಗಳ ವಿದ್ಯಾರ್ಥಿಗಳು 11 ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 