ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಮಕ್ಕಳೇ ದಾರೀದೀಪ: ಗದಗದಲ್ಲಿ ಶಾಲಾ ಮಕ್ಕಳಿಂದ ‘ಪರಿಸರ ಕ್ರಾಂತಿ’
Children are the beacon of hope for a plastic-free society: 'Environmental revolution' by school chi
ಗದಗ 01: ಸಾಂಪ್ರದಾಯಿಕ ಹಬ್ಬಗಳು ಕೇವಲ ಸಾಂಸ್ಕೃತಿಕ ಆಚರಣೆಗಳಾಗದೆ, ಪ್ರಕೃತಿಯನ್ನು ರಕ್ಷಿಸುವ ವೈಚಾರಿಕ ವೇದಿಕೆಗಳಾಗಬೇಕು ಎಂದು ದಾರೀದೀಪ ಮಹಿಳಾ ವಿವಿಧೋದ್ದೇಶಗಳ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಮುಳುಗುಂದ ಪ್ರತಿಪಾದಿಸಿದರು. ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂಬರ್ 15ರಲ್ಲಿ ಕಾರ ಹುಣ್ಣಿಮೆ ಹಬ್ಬದ ಅಂಗವಾಗಿ ದಾರೀದೀಪ ಮಹಿಳಾ ವಿವಿಧೋದ್ದೇಶಗಳ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಪ್ಲಾಸ್ಟಿಕ್ ರಹಿತ ಹಾಗೂ ಕಾಗದದ ಗಾಳಿಪಟ ತಯಾರಿಸುವ ವಿಶಿಷ್ಟ ಸ್ಪರ್ಧೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿ ಇಂದಿನ ಆಧುನಿಕ ಆಚರಣೆಗಳಲ್ಲಿ ಪ್ಲಾಸ್ಟಿಕ್ ಮಹಾಮಾರಿ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ಪ್ರಕೃತಿಯನ್ನು ನಾಶಮಾಡಿ ಆಚರಿಸುವ ಯಾವುದೇ ಹಬ್ಬ ನೈಜ ಸಂಸ್ಕೃತಿಯಾಗಲು ಸಾಧ್ಯವಿಲ್ಲ. ವಿಷಕಾರಿ ಪ್ಲಾಸ್ಟಿಕ್ನಿಂದ ಭೂಮಿಯನ್ನು ಮುಕ್ತಗೊಳಿಸುವ ಸಂಕಲ್ಪ ನಮ್ಮದಾಗಬೇಕು. ಇಂದು ಮುದ್ದು ಮಕ್ಕಳು ಕಾಗದದ ಗಾಳಿಪಟ ಹಾರಿಸುವ ಮೂಲಕ ಇಡೀ ಸಮಾಜಕ್ಕೆ ದೊಡ್ಡ ಪರಿಸರ ಜಾಗೃತಿಯ ಸಂದೇಶ ನೀಡಿದ್ದಾರೆ" ಎಂದು ಶ್ರೀಮತಿ ಶಕುಂತಲಾ ಮುಳುಗುಂದ ಹೇಳಿದರು. ಸಹಶಿಕ್ಷಕಿಯವರಾದ ಶ್ರೀಮತಿ ಪ್ರೇಮ ಬ್ಯಾಳಿ ಅವರು ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ಪರಿಸರ ಹಾನಿಯನ್ನು ತಡೆಯಲು ಬಾಲ್ಯದಿಂದಲೇ ಇಂತಹ ಪರ್ಯಾಯ ಮಾರ್ಗಗಳನ್ನು ರೂಢಿಸುವುದು ಇಂದಿನ ತುರ್ತು ಅಗತ್ಯ" ಎಂದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 