ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕ
ಹಾವೇರಿ: ಮಕ್ಕಳ ಹಕ್ಕು, ಕರ್ತವ್ಯ ಹಾಗೂ ರಕ್ಷಣಾ ಕಾಯ್ದೆಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಭಗತ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿರೇಶ್ ಹಿತ್ತಲಮನಿ ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾವೇರಿ ಇವರ ಆಶ್ರಯದಲ್ಲಿ ಮಂಗಳವಾರ ನಗರದ ಭಗತ್ ಪದವಿ ಪೂರ್ವ ಕಾಲೇಜಿನಲ್ಲಿ ಪೊಕ್ಸೋ ಕಾಯ್ದೆ-2012, ಮಕ್ಕಳ ಹಕ್ಕುಗಳು ಹಾಗೂ ಸಂರಕ್ಷಣೆಯ ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳ ರಕ್ಷಣೆಗೆಂದೆ ಅನೇಕ ಜಾಗೃತಿ ಕಾರ್ಯಕ್ರಮವನ್ನು ಸಕರ್ಾರ ಹಮ್ಮಿಕೊಂಡಿದೆ. ವಿದ್ಯಾಥರ್ಿಗಳು ಸ್ವ ಜಾಗೃತಿ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಸಮಾಜವನ್ನು ಗೌರವಿಸಬೇಕು ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು.
ಮಕ್ಕಳಿಗೆ ಕಾನೂನಿನ ಅರಿವು ಅವಶ್ಯಕವಾಗಿದೆ. ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯ ವಿವಾಹ, ಪೊಕ್ಸೋ- 2012, ಮೋಟಾರು ಕಾಯ್ದೆ, ಬಾಲ ಕಾಮರ್ಿಕತೆ, ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಕಾವಲು ಸಮಿತಿ ಹಾಗೂ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದರ್ೇಶಕ ಪಿ.ವೈ.ಶೆಟ್ಟಪ್ಪನವರ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಲ್ಲಿಕಾಜರ್ುನ ಮಠದ, ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 