ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಅಗತ್ಯ : ಶಾಸಕ ಜೆ.ಎನ್.ಗಣೇಶ
Children need quality and valuable education: MLA J.N. Ganesh
ಲೋಕದರ್ಶನ ವರದಿ
ಕಂಪ್ಲಿ 07: : ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಅಗತ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ವಾಲ್ಮೀಕಿ ವೃತ್ತದ ಬಳಿಯ ಹೊಸಪೇಟೆ ಬೈಪಾಸ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರುಗಡೆಯಲ್ಲಿರುವ ಶ್ರೀನಿಧಿ ಎಜ್ಯುಕೇಶನ್ ಟ್ರಸ್ಟ್‌ನ ಹಲೋ ಕಿಡ್ಸ್ ಶೌರ್ಯ ವಿದ್ಯಾಲಯ(ಸ್ಕೂಲ್)ವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಇಂಗ್ಲಿಷ್ ಶಿಕ್ಷಣವೊಂದೇ ಮುಖ್ಯವಲ್ಲ. ಅಂಕಪಟ್ಟಿಗೆ ಸೀಮಿತಗೊಳಿಸದೆ ಎಲ್ಲ ಆಯಾಮಗಳಲ್ಲೂ ಮಕ್ಕಳು ಸವಾಂರ್ಗೀಣ ಪ್ರಗತಿ ಸಾಧಿಸಲು ಪೂರಕ ವಾತಾವರಣ ಕಲ್ಪಿಸಬೇಕು. ಪೋಷಕರು ಕೂಡ ಮನೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ, ಮಕ್ಕಳ ಅಭಿರುಚಿ ಗಮನಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು. ಇತ್ತೀಚಿನ ದಿನಮಾನದಲ್ಲಿ ಮಕ್ಕಳು ಮೊಬೈಲ್ ದಾಸರಾಗಿದ್ದಾರೆ. ಆದ್ದರಿಂದ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ.
ಆದ್ದರಿಂದ ಮಕ್ಕಳಿಗೆ ಕಲಿಕಾ ಹಂತದಲ್ಲಿ ಒಳ್ಳೆಯ ಶಿಕ್ಷಣ ನೀಡುವ ಜೊತೆಗೆ ಸಂಸ್ಕೃತಿ, ಸಂಸ್ಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನೂತನ ಸಂಸ್ಥೆಯ ಮಕ್ಕಳಿಗೆ ಎಲ್.ಕೆ.ಜಿ ಮತ್ತು ಯುಕೆಜಿಯಿಂದಲೇ ಒಳ್ಳೆಯ ಶಿಕ್ಷಣ ನೀಡುವ ಭರವಸೆ ಜೊತೆಗೆ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದರು.ನೂತನ ಶಾಲೆಯ ಮುಖ್ಯಶಿಕ್ಷಕಿ ಬಿ.ದುರ್ಗಾಲಕ್ಷ್ಮೀ ಮಾತನಾಡಿ, ಚಿಕ್ಕಮಕ್ಕಳಿಗೆ ಸುಲಭದ ರೀತಿಯಲ್ಲಿ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕೆಂಬ ನಿಟ್ಟಿನಲ್ಲಿ ನೂತನ ಶಾಲೆಯನ್ನು ಆರಂಭಿಸಲಾಗಿದೆ. ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಕೆ.ಎಸ್.ಚಾಂದ್ ಬಾಷಾ ಸೇರಿದಂತೆ ಮುಖಂಡರು, ಪೋಷಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 