ಬಡ ರೈತರ ಮಕ್ಕಳು ಉನ್ನತ ಶಿಕ್ಷಣವಂತರಾಗಬೇಕು: ರವಿಕಾಂತ ಅಂಗಡಿ
Children of poor farmers should be highly educated: Ravikant Angadi
ಶಿರಹಟ್ಟಿ 25 : ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಅಭಿವೃದ್ಧಿಯೇ ದೇಶದ ಪ್ರಗತಿಗೆ ಮೂಲ ಕಾರಣವಾಗಿದೆ. ವಿಶೇಷವಾಗಿ ಬಡ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಉತ್ತರ ಕರ್ನಾಟಕ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಹೋರಾಟಗಾರರಾದ ರವಿಕಾಂತ ಅಂಗಡಿ ಹೇಳಿದರು.ತಾಲೂಕಿನ ಕಡಕೋಳ ಗ್ರಾಮದಲ್ಲಿ ಬಗರ್ ಹುಕುಂ ರೈತರ ಸಮಸ್ಯೆಗಳ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಭೂಮಿ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ರೈತರು ತಮ್ಮ ಜಮೀನುಗಳ ಹಕ್ಕುಪತ್ರ ಪಡೆಯಲು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸರ್ಕಾರದ ಮಾರ್ಗಸೂಚಿಯಂತೆ ಸಂಬಂಧಿತ ಇಲಾಖೆಗೆ ಸಲ್ಲಿಸಬೇಕು ಎಂದು ತಿಳಿಸಿದರು.ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಮರ್ಕವಾಗಿ ಸಂರಕ್ಷಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಿದರೆ ಸಮಸ್ಯೆಗಳ ಪರಿಹಾರಕ್ಕೆ ಅನುಕೂಲವಾಗುತ್ತದೆ. ಜೊತೆಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಸಮರ್ಕ ಮಾಹಿತಿ ಹೊಂದಿರಬೇಕು.
ತಮ್ಮ ಹಕ್ಕುಗಳಿಗಾಗಿ ಕಾನೂನಾತ್ಮಕವಾಗಿ ಹೋರಾಟ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ ರವಿಕಾಂತ ಅಂಗಡಿ ಅವರು, ಬಗರ್ ಹುಕುಂ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ನಿರಂತರ ಹೋರಾಟ ನಡೆಸಲಾಗುವುದು ಎಂದು ಭರವಸೆ ನೀಡಿದರು. ಉತ್ತರ ಕರ್ನಾಟಕ ಭಾಗದ ರೈತರು ನೀರಾವರಿ, ಭೂ ಹಕ್ಕು ಹಾಗೂ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ದೊರಕಬೇಕಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಅವರು, ರೈತರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆರ್ಥಿಕ ಸಂಕಷ್ಟಗಳ ನಡುವೆಯೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬಾರದು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸಲು ಸಾಧ್ಯವಾಗುತ್ತದೆ.
ಗ್ರಾಮೀಣ ಭಾಗದ ಮಕ್ಕಳು ವೈದ್ಯರು, ಇಂಜಿನಿಯರ್ಗಳು, ಆಡಳಿತಾಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರಾಗಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೈತರು ತಮ್ಮ ಜಮೀನು, ಹಕ್ಕುಪತ್ರ, ಬೆಳೆಸಾಲ, ಸರ್ಕಾರಿ ಸೌಲಭ್ಯಗಳು ಹಾಗೂ ಇತರೆ ಸಮಸ್ಯೆಗಳ ಕುರಿತು ತಮ್ಮ ಅಹವಾಲುಗಳನ್ನು ಮಂಡಿಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ರವಿಕಾಂತ ಅಂಗಡಿ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಕಡಕೋಳ ಗ್ರಾಮದಲ್ಲಿ ನಡೆದ ಈ ಸಭೆಯಲ್ಲಿ ಸುಮಾರು 40 ರಿಂದ 50 ರೈತರು ಭಾಗವಹಿಸಿದ್ದರು. ರೈತರ ಹಕ್ಕುಗಳು, ಶಿಕ್ಷಣದ ಮಹತ್ವ ಹಾಗೂ ಬಗರ್ ಹುಕುಂ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಈ ಸಂದರ್ಭದಲ್ಲಿ ಮಂಜುನಾಥ ಅರೆಪಳ್ಳಿ, ನಾಮದೇವ ಮಾಂಡ್ರೆ, ರೈತ ಮುಖಂಡರಾದ ಅಂದಾನಪ್ಪ ಮುಳಗುಂದ, ಈಶ್ವರಗೌಡ ಗೌಡ್ರ, ಈಶ್ವರ ಹಿರೇಮಠ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.ಫೊಟೊ ಲಗತ್ತಿಸಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 