ಮಕ್ಕಳು ಉತ್ತಮ ಆರೋಗ್ಯ ಅಭ್ಯಾಸ ರೂಢಿಸಿಕೊಳ್ಳಿ: ಲಕ್ಷ್ಮಿದೇವಿ
Children should adopt good health habits: Lakshmi Devi
ಬಳ್ಳಾರಿ 05: ಆರೋಗ್ಯವಂತ ಯುವ ನಾಡನ್ನು ರೂಪಿಸಬೇಕೆಂದರೆ ಮಕ್ಕಳು ಉತ್ತಮ ಆರೋಗ್ಯದ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಾಣಾಧಿಕಾರಿ ಲಕ್ಷ್ಮಿದೇವಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಪಂ ಪೋಷಣ್ ವಿಭಾಗದಿಂದ ಕೆ.ಎಂ.ಇ.ಅರ್.ಸಿ ಇಲಾಖೆಯ ಸಿಇಪಿಎಂಐಜೆಡ್ ಯೋಜನೆಯಡಿ ನಗರದ ಕರ್ನಾಟಕ ಪಬ್ಲಿಕ್ ಶಾಲೆ (ಬಾಲಕಿಯರ) ಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶೇಷ ಪೂರಕ ಪೌಷ್ಠಿಕ ಅಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ನತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಮತ್ತು ಎಎನ್‌ಎಎಫ್ ಯೋಜನೆಯ ಜೊತೆಗೆ ಶಾಲಾವಧಿಯ ನಂತರ ಮಕ್ಕಳಿಗೆ ಉಸುಲಿಕಾಳು ಹಾಗೂ ಹಣ್ಣನ್ನು ವಿತರಿಸಲಾಗುತ್ತದೆ ಎಂದರು.
ಜಿಪಂ ಪೋಷಣ್ ವಿಭಾಗದ ಶಿಕ್ಷಣಾಧಿಕಾರಿ ಡಿ.ಕಸ್ತೂರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರವು ಶಾಲಾ ಮಕ್ಕಳ ಪೋಷಕರಂತೆ ಕಾಳಜಿ ವಹಿಸುತ್ತಿದೆ. ಮಕ್ಕಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಉಸುಲಿಕಾಳಲ್ಲಿರುವ ವಿಟಮಿನ್, ಪ್ರೋಟಿನ್‌ಗಳು ಮಕ್ಕಳ ದೈಹಿಕ ಬೆಳವಣಿಗೆಯ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಉಪಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯ ಎಪಿಸಿ ಶಖೀಲ್ ಅಹ್ಮದ್, ಬಳ್ಳಾರಿ ಪಶ್ಚಿಮ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ್ ಜಿ.ಎಸ್., ಸಿರುಗುಪ್ಪ ತಾಲ್ಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಝಾಫರ್ ಷರೀಫ್, ಜಿಲ್ಲೆಯ ಅಇಕಒಋ ಯೋಜನೆಯ ನಿಕಟಪೂರ್ವ ನೋಡಲ್ ಅಧಿಕಾರಿ ಬಸವರಾಜ್ ಮಿಂಚೇರಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.
ಬಳ್ಳಾರಿ ಪೂರ್ವ ಮತ್ತು ಪಶ್ಚಿಮ ವಲಯಗಳ ಅಕ್ಷರ ದಾಸೋಹ ಸಹಾಯಕ ಅಧಿಕಾರಿ ಶಿವನನಾಯ್ಡ್ ಸ್ವಾಗತಿಸಿದರು. ಸಂಡೂರಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಶ್ರೀಧರಮೂರ್ತಿ.ಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 