ಮಕ್ಕಳು ಜಿಲ್ಲೆಯ ಹೆಸರನ್ನು ಉತ್ತುಂಗಕ್ಕೇರಿಸಬೇಕು: ಡಾ.ದೀಲೀಷ್ ಶಶಿ.
Children should elevate the name of the district: Dr. Dileesh Shashi.
ಕಾರವಾರ, ಅ.14: ವೇಷಭೂಷಣ ತೊಟ್ಟು , ಮಕ್ಕಳ ಹಬ್ಬ ವೇದಿಕೆಯಲ್ಲಿ ಸ್ಪರ್ಧಿಸಲು ಆಗಮಿಸಿರುವ ಮಕ್ಕಳೆಲ್ಲ ತಮ್ಮ ಮುಂದಿನ ಜೀವನದಲ್ಲಿ ಉತ್ತಮ ಶಿಕ್ಷಣ ಪಡೆದು , ಉನ್ನತ ಸ್ಥಾನದ ಅಧಿಕಾರಿ, ಕಲಾವಿದರಾಗಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯದ ಹೆಸರನ್ನು ಹೆಚ್ಚಿಸುವಂತರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದೀಲೀಶ್ ಶಶಿ ಹೇಳಿದರು
ಅವರು ಶುಕ್ರವಾರ ಪೊಲೀಸ್ ಕಲ್ಯಾಣ ಮಂಟಪದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಕ್ಕಳ ಹಬ್ಬ 2025-26 ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮ ದಿನಾಚರಣೆ ಅಂಗವಾಗಿ ಇಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದ್ದು, ಮನೆಯಲ್ಲಿ ಮಕ್ಕಳಿದ್ದಾರೆ ಪ್ರತಿ ನಿತ್ಯವೂ ಹಬ್ಬವೇ ಆಗಿರುತ್ತದೆ, ಇಂದು ಮಕ್ಕಳ ಹಬ್ಬದ ಕಾರ್ಯಕ್ರಮದಲ್ಲಿ ಹಬ್ಬದ ವಾತಾವರಣ ಸೃಷ್ಠಿಯಾಗಿದೆ. ಮಕ್ಕಳು ತಮ್ಮ ಇಚ್ಛೆಯ ಕ್ಷೇತ್ರದಲ್ಲಿ ಸಾಧನೆ ಮಾಡಿ, ಜಿಲ್ಲೆ ಮತ್ತು ನಾಡಿಗೆ ಕೀರ್ತಿ ತರಬೇಕು ಎಂದರು.ನಗರಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮಾತನಾಡಿ, ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಮಕ್ಕಳ ಜೊತೆ ಪಾಲಕರು, ಶಿಕ್ಷಕರು ಉತ್ಸುಕರಾಗಿ ಆಗಮಿಸಿದ್ದು, ಮಕ್ಕಳಿಗೆ ಮೊಬೈಲ್ ಮತ್ತು ಜಂಕ್ ಪುಡ್‌ನಿಂದ ದೂರವಿಡಬೇಕು. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಮನೆಯಲ್ಲಿ ತಯಾರಿಸಿದ ಉಪಹಾರವನ್ನು ಊಟದ ಬಾಕ್ಸ್‌ನಲ್ಲಿ ಕೊಟ್ಟು ಕಳುಹಿಸಬೇಕು ಹಾಗೂ ಮಕ್ಕಳಿಗೆ ಆಸಕ್ತಿ ಇರುವ ಚಟುವಟಿಕೆಯಲ್ಲಿ ಅವರನ್ನು ಪ್ರೋತ್ಸಾಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಎಚ್. ಕೃಷ್ಣಪ್ಪ ಮಾತನಾಡಿ, ಮಕ್ಕಳ ದೈಹಿಕ ಮತ್ತು ಮಾನಸಿಕವಾಗಿ ಬೆಳವಣಿಗೆಯ ಅಭಿವೃದ್ಧಿ ಹೊಂದಬೇಕಾದರೆ ಅವರನ್ನು ಮೊಬೈಲ್‌ನಿಂದ ದೂರವಿಡಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸೂರ್ಯ ಪ್ರಕಾಶ ಸ್ವಾಗತಿಸಿ, ನಿರೂಪಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 