ಐದು ವರ್ಷದೊಳಗಿನ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯಬಾರದು -ಜಿಲ್ಲಾಧಿಕಾರಿ
Children under five years of age should not be left out of pulse polio vaccination - District Magist
ಲೋಕದರ್ಶನ ವರದಿ
ಜೂ.28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ
ಹಾವೇರಿ 23 : ಜಿಲ್ಲೆಯಲ್ಲಿ ಇದೇ ಜೂ.28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದ್ದು, ಸೊನ್ನೆಯಿಂದ ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಮುಂಚಿತವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಮಕ್ಕಳಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಥಾ ಮೂಲಕ ಜಾಗೃತಿ ಮೂಡಿಸಬೇಕು. ಗ್ರಾಮ ಪಂಚಾಯತಿಗಳಿಂದ ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಟಾಂ ಟಾಂ ಮೂಲಕ ಪ್ರಚಾರ ಕೈಗೊಳ್ಳಲು, ಪಲ್ಸ್ ಪೋಲಿಯೋ ದಿನದಂದು ಅಂಗನವಾಡಿ ಕೇಂದ್ರಗಳು ಆರಂಭ ಇರುವಂತೆ ನೋಡಿಕೊಳ್ಳಬೇಕು. ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಮುಂಚಿತವಾಗಿ ಪ್ರಚಾರ ಕೈಗೊಳ್ಳಲು, ಬ್ಯಾನರ್ ಹಾಗೂ ಬಿತ್ತಿ ಪತ್ರ ಪ್ರದರ್ಶಿಸಲು, ಜಲ್ಲಿ ಒಡೆಯುವ, ಗಣಿಗಾರಿಕೆ ಹಾಗೂ ಕುರಿ ಕಾಯುವವರು ಸೇರಿದಂತೆ ಇತರೆ ವಲಸೆ ಕಾರ್ಮಿಕರ ಐದುವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವಂತೆ ನಗರಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 