ಸುಮನಹಳ್ಳಿಯ ಚಿತಾಗಾರದಲ್ಲಿ ಚಿಮೂ ಅಂತ್ಯಕ್ರಿಯೆ
ಬೆಂಗಳೂರು ಜ, 12: ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ , ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕರಿ ಗೌರವಗಳೊಂದಿಗೆ ಜರುಗಲಿದೆ.
ಬೆಳಿಗ್ಗೆ 11 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಸುಮನಹಳ್ಳಿಯಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಆದರೆ ಚಿಮೂ ಅವರ ಆಶಯದಂತೆ ಪಾರ್ಥಿವ ಶರೀರಕ್ಕೆ ಯಾವುದೇ ಪೂಜೆ ಮಾಡಲಾಗುವುದಿಲ್ಲ ಎಂದೂ ಹೇಳಲಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡಿ ಚಿದಾನಂದ ಮೂರ್ತಿಯವರ ಅಂತಿಮ ದರ್ಶನ ಪಡೆದಿದ್ದರು.
1931ರಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಜನಿಸಿದ್ದ ಚಿದಾನಂದ ಮೂರ್ತಿಯವರು ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 