ಬೀಜಿಂಗ್, ನ 19 : ಉತ್ತರ ಚೀನಾದ ಶಾನ್ಸಿ ಪ್ರಾಂತ್ಯದಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 15 ಜನರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಇಲ್ಲಿನ ಪಿಂಗ್ಯಾವೋ ಕೌಂಟಿಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಸಮಯದಲ್ಲಿ 35 ಜನರು ಗಣಿಯ ನೆಲಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಕ್ಸಿನುಹ ವರದಿ ಮಾಡಿದೆ. 11 ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.