ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಆತ್ಯಾಚಾರ: ಬೆಂಕಿ ಹಚ್ಚಿ ಕೊಲೆ ಮಾಡಿ ಸುಟ್ಟ ಕಾಮುಕರು: ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆಗೆಗಾಗಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ
Chitradurga hostel student raped: lovers set her on fire, murdered her and burned her: SFI-led stude
ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಆತ್ಯಾಚಾರ: ಬೆಂಕಿ ಹಚ್ಚಿ ಕೊಲೆ ಮಾಡಿ ಸುಟ್ಟ ಕಾಮುಕರು: ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆಗೆಗಾಗಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ
ಹಾವೇರಿ 21: ನಗರದ ಎಲ್‌ಐಸಿ ಬಸ್ ನಿಲ್ದಾಣದಿಂದ ವಾಲ್ಮೀಕಿ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿ ಚಿತ್ರದುರ್ಗದ ಹೊರವಲಯದಲ್ಲಿರುವರಾಷ್ಟ್ರೀಯ ಹೆದ್ದಾರಿ ಬಳಿ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದನ್ನು ಖಂಡಿಸಿ, ತಪ್ಪಿತಸ್ಥ ಆರೋಪಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.ಚಿತ್ರದುರ್ಗದ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲದಲ್ಲಿ ದ್ವಿತೀಯ ವರ್ಷದ ಬಿಎ ಪದವಿ ವಿದ್ಯಾಭ್ಯಾಸ ಮಾಡುತ್ತಿದ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿ ಬಳಿ ಮನೆಗೆ ಹೋಗುವಾಗ ಅಪಹರಿಸಿ,ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತೀವ್ರವಾಗಿಖಂಡಿಸುತ್ತದೆ.
ಈ ಸಂದರ್ಭದಲ್ಲಿಎಸ್‌ಎಫ್‌ಐಜಿಲ್ಲಾಧ್ಯಕ್ಷ ಬಸವರಾಜಎಸ್ ಮಾತನಾಡಿ, ವಿದ್ಯಾಭ್ಯಾಸ ಮುಗಿಸಿ ಸುರಕ್ಷಿತವಾಗಿ ಮನೆಗೆ ತಲುಪಬೇಕಾದ ಹಾಸ್ಟೆಲ್ ವಿದ್ಯಾರ್ಥಿನಿಯನ್ನುಕ್ರೂರವಾಗಿಕೊಲ್ಲಲಾಗಿದಲ್ಲದೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದುಚಿತ್ರದುರ್ಗದರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿರುವುದುಘನಘೋರ ದುರಂತವಾಗಿದೆ.ಕಳೆದ ಎರಡು ದಿನಗಳಿಂದ ವಿದ್ಯಾರ್ಥಿನಿಯು ಕಾಣೆಯಾಗಿದ್ದು ಅರೆಬೇರೆ ಬೆಂದ ಸುಟ್ಟ ಸ್ಥಿತಿಯಲ್ಲಿ ಆತ್ಯಾಚಾರ ಎಸಿಗೆ ಕೊಲೆ ಮಾಡಿರುವ ಅನುಮಾದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೂಡಲೇ ಈ ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು ಮತ್ತುಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದುಎಸ್‌ಎಫ್‌ಐಒತ್ತಾಯಿಸುತ್ತದೆ. ವಿದ್ಯಾರ್ಥಿನಿಯರು ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವಅತ್ಯಾಚಾರ, ದೌರ್ಜನ್ಯ, ಕೊಲೆ, ಸುಲಿಗೆಗಳನ್ನು ತಡೆಯುವಲ್ಲಿ ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿರಾಜ್ಯ ಹಾಗೂ ಕೇಂದ್ರಸರ್ಕಾರಗಳು ಸಂಪೂರ್ಣ ವಿಫಲವಾಗಿವೆ.
ಸ್ವಾತಂತ್ರ್ಯ ಸಿಕ್ಕು 78ನೇ ಸಂಭ್ರಮಾಚರಣೆಯಲ್ಲಿದರುಇವತ್ತು ಮಹಿಳೆಯರಿಗೆ ವಿದ್ಯಾರ್ಥಿನಿಯರಿಗೆ ಸ್ವಾತಂತ್ರ್ಯವಾಗಿ, ಭಯಬಿತ್ತಿಯಿಂದ ಮುಕ್ತವಾಗಿ, ಒಬ್ಬಂಟಿಯಾಗಿಓಡಾಡುವ ಸುರಕ್ಷಿತ ಸ್ಥಳ ಇಲ್ಲದೆರುವುದು ನಮ್ಮದೇಶದದುರಂತವಾಗಿದೆ. ಕೂಡಲೇತಪ್ಪಿತಸ್ಥ ಆರೋಪಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕುಎಂದು ಆಗ್ರಹಿಸಿದರು.ಕಾಲೇಜ್ ಘಟಕ ಕಾರ್ಯದರ್ಶಿ ಗಂಗಾ ಯಲ್ಲಾಪುರ ಮಾತನಾಡಿ, ಬೇಟಿ ಬಚಾವೋ, ಬೇಟಿ ಪಢಾವೋ ಎಂಬ ಹೆಸರು ’ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವಿಗೆ ಶಿಕ್ಷಣ ನೀಡಿ’ ಎಂದು ಹೇಳುತ್ತಾರೆ ಆದರೆ ಓದಿಸುವುದು ಅಷ್ಟೇ ಅಲ್ಲಕಾಪಾಡುವುದು ನಿಮ್ಮಕರ್ತವ್ಯವಾಗಬೇಕು. ನಿಮ್ಮ ಮನೆಯ ಹೆಣ್ಣಿನ ಸ್ಥಾನದಲ್ಲಿಎಲ್ಲರನ್ನು ನೋಡಬೇಕು.ಇಂತಹಅನ್ಯಾಯವುತಂದೆ ತಾಯಿಗಳಿಗೆ ಗಾಯದ ಮೇಲೆ ಬೆರೆ ಎಳೆದಂತೆ ಆಗಿದೆ.ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ ನ್ಯಾಯಒದಗಿಸಲು ಸೂಕ್ತ ರಕ್ಷಣೆ ನೀಡಬೇಕುಎಂದು ಆಗ್ರಹಿಸಿದರು. ವಿದ್ಯಾರ್ಥಿನಿ ಪ್ರೇಮಾ ಪೂಜಾರ ಮಾತನಾಡಿ, ಚಾಕೊಲೇಟ್ ನೀಡಿ ಎಳೆ ಮಕ್ಕಳಿಂದ ಹಿಡಿದು ವಯಸ್ಸಾದ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರಗಳ ಕೊಲೆ ಮಾಡುತ್ತಿರುವ ಸುದ್ದಿ ಕೇಳಿ ವಿದ್ಯಾರ್ಥಿನಿಯರು ಹಾಗೂ ಪಾಲಕರು ಭಯಬಿತ್ತರಾಗಿದ್ದಾರೆ ಸರ್ಕಾರಗಳು ಈ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳಬೇಕು. ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೇಸಗಿದ ಆರೋಪಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕೆಂದುಆಕ್ರೋಶ ವ್ಯಕ್ತಪಡಿಸಿದರು.ಎಸ್‌ಎಫ್‌ಐ ಮುಖಂಡಅರುಣ್ ನಾಗವತ್ ಮಾತನಾಡಿ, ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಆರೋಪಿಯನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿನಿಯರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಕೊಲೆಗಳನ್ನು ಸರ್ಕಾರಗಳು ತಡೆಗಟ್ಟಲು ಮುಂದಾಗಬೇಕು. ಒಂದು ವೇಳೆ ಸರ್ಕಾರ ಸರಿಯಾದ ಸೂಕ್ತ ರಕ್ಷಣೆ, ನ್ಯಾಯ ನೀಡಲು ಮುಂದಾಗದಿದರೆ ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜ್ ಬಂದ್ ಮಾಡಿ ಭಾರಿ ಪ್ರಮಾಣದ ಹೋರಾಟ ಮಾಡಲಾಗುವುದುಎಂದುಎಚ್ಚರಿಕೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 