ದೆಹಲಿ, ಡಿ 17: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯ ಸಮಯದಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಕುರಿತ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ವಿದ್ಯಾತಿಗಳ ಪ್ರತಿಭಟನೆ ಕುರಿತು ಸೋಮವಾರವೆ ಎಚ್ಚರಿಕೆ ನೀಡಿದ್ದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಕಾನೂನನ್ನು ಯಾರೊಬ್ಬರು ಕೈಗೆ ತೆಗೆದುಕೊಳ್ಳುಬಾರದು ಎಂದು ಎಚ್ಚರಿಕೆ ನೀಡಿದ್ದರು. ಮೇಲಾಗಿ ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ನಾಶ ಪಡಿಸುವ ಹಕ್ಕು ಅಥವಾ ಅಧಿಕಾರ ಯಾರಿಗೂ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ಮಾಡಿದ ಪ್ರಕರಣ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಖಂಡಿಸಿ ವಕೀರ ಸಂಘಟನೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಇಂದು ಸುಪ್ರೀಂ ಕೋಟ್ರ್ನಲ್ಲಿ ನಡೆಯಲಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದಲೂ ಹೋರಾಟ ನಡೆಸುತ್ತಿದ್ದಾರೆ.