ಪೌರತ್ವ ತಿದ್ದುಪಡಿ, ತಪ್ಪಿತಸ್ಥರ ಮೇಲೆ ಕ್ರಮಕ್ಕಾಗಿ ಸಲ್ಲಿಸಿರುವ ಅರ್ಜಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ನವದೆಹಲಿ, ಫೆ 26 :   ಪೌರತ್ವ  ತಿದ್ದುಪಡಿ ಕಾಯ್ದೆ ವಿರೋಧಿಸಿ, ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ  ಬರಲಿದೆ.

ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ಜತೆಗೆ ಆರೋಪಿಗಳ ಮೇಲೆ ಎಫ್ಐಆರ್ ದಾಖಲಿಸುವಂತೆ ಕೋರಿ 

ಮಾಜಿ ಮುಖ್ಯ ಮಾಹಿತಿ ಆಯುಕ್ತ ವಾಜತ್ ಅಬಿಬುಲ್ಲಾ ಮತ್ತಿತರರು ನ್ಯಾಯಪೀಠಕ್ಕೆ  ಸಾರ್ವಜನಿಕ  ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ  ಎಸ್.ಕೆ. ಪಾಲ್ ಹಾಗೂ  ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ.

ಪೌರತ್ವ  ತಿದ್ದುಪಡಿ ಕಾಯ್ದೆ ವಿರೋಧಿಸಿ,  ದೆಹಲಿಯ ಶಾಹಿನ್ಭಾಗ್ ಪ್ರದೇಶದಲ್ಲಿ ಬೀಡು ಬಿಟ್ಟು ಪ್ರತಿಭಟನೆ ನಡೆಸುತ್ತಿರುವವರನ್ನು  ತೆರವುಗೊಳಿಸುವಂತೆ  ಕೋರಿ ಸುಪ್ರೀಂ ಕೋರ್ಟ್ಗೆ  ಈಗಾಗಲೇ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.  ಈ ಅರ್ಜಿಸಲು ಸಹ ಇಂದು ವಿಚಾರಣೆಗೆ ಬರಲಿದೆ.