ಪಾದಚಾರಿ ಮಾರ್ಗ ತೆರವಿಗೆ ನಗರಸಭೆಯ ಕಟ್ಟುನಿಟ್ಟಿನ ಕ್ರಮ
City Council's strict measures to clear footpaths
ಲೋಕದರ್ಶನ ವರದಿ
ದಾಂಡೇಲಿ 24: ಪಾದಾಚಾರಿ (ಪುಟ್ ಪಾತ್) ರಸ್ತೆಯನ್ನು ತೆರವು ಗೊಳಿಸುವ ಕಾರ್ಯವನ್ನು ಸ್ಥಳೀಯ ನಗರಸಭೆ ಹಮ್ಮಿ ಕೊಂಡಿದ್ದು ಇಂದು ಲೆನಿನ್ ಹಾಗು ಜೆ.ಎನ್ ರಸ್ತೆಯಲ್ಲಿ ಅತಿಕ್ರಮಣ ದಾರರ ವಿರೋದದ ನಡುವೆಯೂ ಕಾರ್ಯಗತಗೊಳಿಸಿದರು. ಸವೋಚ್ಚ ನ್ಯಾಯಾಲಯದ ಆದೇಶದಂತೆ ಪಾದಾಚಾರಿಗಳಿಗೆ ಹಾಗೂ ಶಾಲಾಮಕ್ಕಳಿಗೆ ಅತೀವ ತೊಂದರೆ ಉಂಟಾಗುತ್ತಿರುವ ಕಾರಣ ಪುಟ್ ಪಾತ್ ಒತ್ತುವರಿ ಮಾಡಿಕೊಂಡಿದ್ದು ತೆರವುಗೊಳಿಸಲು ನಗರಸಭೆ ಪೌರಾಯುಕ್ತ ವಿವೇಕ್ ಬನ್ನೆ ಅವರ ನೇತ್ರತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿರುತ್ತಾರೆ. ತೆರವು ಗೊಳಿಸುವ ಹಂತದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದರೆ, ಕೆಲವರು ಸಹಕರಿಸಿ ತಾವೆ ಖುದ್ದಾಗಿ ತೆರವುಗೊಳಿಸಿದರು. ನಗರಸಭೆ ವ್ಯವಸ್ಥಾಪಕ ಪರಶುರಾಮ ಶೀಂಧೆ ಕಂದಾಯ ಅಧಿಕಾರಿ, ಬಾಳು ಗವಸ, ಆರೋಗ್ಯ ನೀರೀಕ್ಷಕ ವಿಲಾಸ್ ಹಾಗೂ ಸಿಬ್ಬಂದಿಗಳು ತೆರವು ಕಾರ್ಯದಲ್ಲಿ ಪಾಲಗೊಂಡಿದ್ದರು.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 