ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಈಗಾಗಲೆ ವೇಳಾಪಟ್ಟಿ ಪ್ರಕಟಿಸಿದ್ದು, ಚುನಾವಣೆ ಕಾರ್ಯಕ್ಕೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಆಯೋಗದ ನಿದರ್ೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಭಾರ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ, ಸ್ಥಳೀಯ ಸಂಸ್ಥೆ ಚುನಾವಣೆಗೆ ನೇಮಕಗೊಂಡಿರುವ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಸೋಮವಾರದಂದು ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಹಾಗೂ ಯಲಬುಗರ್ಾ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ ಅಲ್ಲದೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅದರನ್ವಯ ಜಿಲ್ಲಾಧಿಕಾರಿಗಳು ಆ. 10 ರಂದು ಅಧಿಸೂಚನೆ ಹೊರಡಿಸುವರು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆ. 10 ರಿಂದಲೇ ಆರಂಭವಾಗಲಿದ್ದು, ಆ. 17 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಬೇಕು. ಆ. 18 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ. 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಆ. 29 ರಂದು ಮತದಾನ ನಡೆಯಲಿದ್ದು, ಮತಗಳ ಎಣಿಕೆ ಕಾರ್ಯ ಆಯಾ ತಾಲೂಕು ಕೇಂದ್ರದಲ್ಲಿ ಜರುಗಲಿದೆ.
ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸಲು ಈಗಾಗಲೆ ವಾಡರ್್ಗಳ ಸಂಖ್ಯೆಗೆ ಅನುಗುಣವಾಗಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು, ಚುನಾವಣಾ ಆಯೋಗ ಹೊರಡಿಸಿರುವ ಚುನಾವಣಾ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಚುನಾವಣೆಯಲ್ಲಿ ನೀತಿ ಸಂಹಿತೆ ಪಾಲನೆ ಸಮರ್ಪಕವಾಗಿ ಆಗಬೇಕು. ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೆ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ. ರಜೆ ಮೇಲೆ ತೆರಳುವಂತಿಲ್ಲ. ನಾಮಪತ್ರಗಳ ಸ್ವೀಕಾರ, ಪರಿಶೀಲನೆ, ಠೇವಣಿ ಇಡುವುದು, ನಾಮಪತ್ರಗಳನ್ನು ಅಭ್ಯಥರ್ಿಗಳು ಭತರ್ಿ ಮಾಡುವುದು, ಅಫಿಡೆವಿಟ್ ಸಲ್ಲಿಕೆ, ಸೂಚಕರ ಸಂಖ್ಯೆಯನ್ನು ಗಮನಿಸುವುದು, ಚುನಾವಣೆಗಳ ಚಿಹ್ನೆ ಹಂಚಿಕೆ ಹೀಗೆ ಎಲ್ಲ ಅಂಶಗಳ ಕುರಿತು ಚುನಾವಣಾ ಆಯೋಗ ಈಗಾಗಲೆ ಸೂಕ್ತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಎಲ್ಲ ಸೂಚನೆಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸಲು ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಭಾರ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಚುನಾವಣೆ ಕುರಿತು ತರಬೇತಿ ನೀಡಿದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ ಅವರು ಮಾತನಾಡಿ, ಅಭ್ಯಥರ್ಿಗಳ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆ. 10 ರಿಂದಲೇ ಪ್ರಾರಂಭವಾಗುವುದರಿಂದ, ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 03 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಬೇಕು. ಆಯಾ ದಿನದ ನಾಮಪತ್ರಗಳ ಸಲ್ಲಿಕೆ ವಿವರವನ್ನು ವಾಡರ್್ವಾರು ಆಯಾ ದಿನದಂದು ಮಧ್ಯಾಹ್ನ 3-15 ಗಂಟೆಯ ಒಳಗಾಗಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ನಾಮಪತ್ರ ನಮೂನೆಯನ್ನು ರೂ. 5 ಶುಲ್ಕ ಪಡೆದು ನೀಡಬೇಕು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಎಲ್ಲ ಅಗತ್ಯ ದಾಖಲೆ ಹಾಗೂ ಫೋಟೋಗಳನ್ನು ಸಲ್ಲಿಸಿರುವ ಕುರಿತು ಖಚಿತಪಡಿಸಿಕೊಳ್ಳಬೇಕು ಹಾಗೂ ಅಫಿಡೆವಿಟ್ನ ಎಲ್ಲ ಕಾಲಂ ಗಳನ್ನು ಭತರ್ಿ ಮಾಡಿರುವ ಬಗ್ಗೆ ಪರಿಶೀಲಿಸಿ ಸ್ವೀಕರಿಸಬೇಕು. ಅಫಿಡೆವಿಟ್ನಲ್ಲಿ ತಪ್ಪು ಮಾಹಿತಿ ನೀಡುವವರಿಗೆ ಐಪಿಸಿ ಸೆಕ್ಷನ್ ಪ್ರಕಾರ ಜೈಲು ವಾಸ ಮತ್ತು ದಂಡನೆ ಶಿಕ್ಷೆ ಇರುತ್ತದೆ ಎಂಬುದನ್ನು ಅಭ್ಯಥರ್ಿಗಳಿಗೆ ಸ್ಪಷ್ಟವಾಗಿ ತಿಳಿಸಬೇಕು. ಚುನಾವಣೆ ಪ್ರಕ್ರಿಯೆ ಕೈಗೊಳ್ಳುವ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಅಗತ್ಯ ಮಾಹಿತಿ ಹಾಗೂ ತರಬೇತಿ ನೀಡಲಾಗುವುದು ಎಂದರು.
ತರಬೇತಿ ಕಾರ್ಯಕ್ರಮದಲ್ಲಿ ಚುನಾವಣೆಗಾಗಿ ನೇಮಕಗೊಂಡಿರುವ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.