ಪೌರಕಾರ್ಮಿಕರ ದಿನಾಚರಣೆ: ಪೌರಕಾರ್ಮಿಕರಿಗೆ ಸನ್ಮಾನ

ಪೌರಕಾರ್ಮಿಕರ ದಿನಾಚರಣೆ: ಪೌರಕಾರ್ಮಿಕರಿಗೆ ಸನ್ಮಾನ  Civic Workers' Day: Felicitation of Civic Workers

ಲಕ್ಷ್ಮೇಶ್ವರ, ಸೆ.23: ಪಟ್ಟಣದ ಪುರಸಭೆ ಸಭಾಭವನದಲ್ಲಿ 15ನೇ ಪೌರಕಾರ್ಮಿಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಸಸಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಾತನಾಡಿದ ಅವರು, ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಬೆಳೆಯುತ್ತಿರುವ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪೌರಕಾರ್ಮಿಕರು ಪ್ರತಿನಿತ್ಯ ಶ್ರಮಿಸುತ್ತಿದ್ದು, ಅವರ ಸೇವೆ ಶ್ಲಾಘನೀಯ ಎಂದರು.  

ಪಟ್ಟಣದ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕದೆ, ಪುರಸಭೆಯ ಕಸ ವಿಲೇವಾರಿ ವಾಹನಕ್ಕೆ ಕಸ ಹಾಕುವ ಮೂಲಕ ಸ್ವಚ್ಛತೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.  ಹಿರಿಯ ಆರೋಗ್ಯ ನೀರೀಕ್ಷಕ ಮಂಜುನಾಥ ಮುದುಗಲ್ ಮಾತನಾಡಿ, ಲಕ್ಷ್ಮೇಶ್ವರ ಪಟ್ಟಣ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ಪೌರಕಾರ್ಮಿಕರ ಸಂಖ್ಯೆಯೂ ಹೆಚ್ಚಾಗಬೇಕು. ಪ್ರಸ್ತುತ ಇರುವ ಪೌರಕಾರ್ಮಿಕರಿಂದ ಪಟ್ಟಣದ ಸ್ವಚ್ಛತೆಗಾಗಿ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದರು.  

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಪುರುಷ ಪೌರಕಾರ್ಮಿಕರಿಗೆ ಹೊಸ ಬಟ್ಟೆ ಹಾಗೂ ಮಹಿಳಾ ಪೌರಕಾರ್ಮಿಕರಿಗೆ ಸೀರೆ ಮತ್ತು ಉಡುಗೊರೆಗಳನ್ನು ವಿತರಿಸಲಾಯಿತು.  ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಕಂದಾಯ ನೀರೀಕ್ಷಕ ಸುರೇಶ್, ಪೂಜಾರಹುಣಮಂತಪ್ಪ ನಂದಣ್ಣವರ, ಶೈಲಜಾ ಪಾಟೀಲ, ಬಸವಣ್ಣಪ್ಪ ನಂದಣ್ಣವರ, ದೇವಪ್ಪ ನಂದಣ್ಣವರ, ನೇತ್ರ ಹೊಸಮನಿ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಸೂರಟೂರ ಸೇರಿದಂತೆ ಪುರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ವಾಟವರ್ಾ್ಯುನ್ಗಳು ಉಪಸ್ಥಿತರಿದ್ದರು.