ಎರಡನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಮುಷ್ಕರ
Civil servants' strike enters second day
ತಾಳಿಕೋಟಿ 29: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕರೆದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಳಿಕೋಟಿ ಪುರಸಭೆ ಕಾರ್ಮಿಕರು ಮೇ 27ರಿಂದ ಆರಂಭಿಸಿದ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿತು.
ಪುರಸಭೆ ಕಾರ್ಯಾಲಯದ ಆವರಣದಲ್ಲಿ ಧರಣಿ ಆರಂಭಿಸಿದ ಪೌರಕಾರ್ಮಿಕರು ರಾಜ್ಯ ಸರ್ಕಾರ ನಮ್ಮೊಂದಿಗೆ ಮಲತಾಯಿ ಧೋರಣೆ ತೋರುತ್ತಿದ್ದು ಎಲ್ಲ ಸರ್ಕಾರಿ ನೌಕರರನ್ನು ಒಂದೇ ದೃಷ್ಟಿಯಿಂದ ಕಾಣುತ್ತಿಲ್ಲ ಎಂದು ಆರೋಪಿಸಿದರು. ನಮ್ಮ ಪ್ರಮುಖ ಬೇಡಿಕೆಗಳಾದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದೇ ಪರಿಗಣಿಸಬೇಕು, ಜ್ಯೋತಿ ಸಂಜೀವಿನಿ ಕೆಜೆಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಹೀಗೆ ಹಲವು ಬೇಡಿಕೆಗಳನ್ನು ತೆಗೆದುಕೊಂಡು ಮುಷ್ಕರ ನಡೆಸುತ್ತಿದ್ದು ಅದು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಎಲ್ಲ ಪೌರಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದರು.
ಈ ಸಮಯದಲ್ಲಿ ಪೌರ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸುರೇಶ ಅಂಬ್ರಣ್ಣವರ, ಜಿಲ್ಲಾ ಪರಿಷತ್ ಕಾರ್ಯದರ್ಶಿ ಶ್ರೀಪಾದ ಜೋಶಿ, ಸಂಘದ ತಾಲೂಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಉಪಾಧ್ಯಕ್ಷ ಸಿದ್ದು ಕೊಳ್ಳಿ, ಸಿದ್ದಲಿಂಗಯ್ಯ ಪಾಟೀಲ,ಶಿವಾನಂದ ಜುಮನಾಳ, ಆರ್ ಐ ಪೊಲೀಸ್ ಪಾಟೀಲ, ಸಂದೀಪ ವಠಾರ, ಐ.ಎಚ್.ಮಕಾಂದಾರ, ಡಿ.ಬಿ.ಜಾನ್ವೇಕರ, ಪ್ರದೀಪ ಶಿವಶರಣ, ಪ್ರಭು ನಾಲತವಾಡ, ಆನಂದ ನಾಯಕ, ಪಡಶೆಟ್ಟಿ, ಫಿರೋಜ್ ಮುಲ್ಲಾ, ರಂಗನಾಥ ಅಜಮನಿ ಹಾಗೂ ಎಲ್ಲಾ ಪೌರಕಾರ್ಮಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 