ಕಂದಗಲ್ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ
Clean drinking water unit for Kandagal school
ಹೂವಿನಹಡಗಲಿ 30: ತಾಲೂಕಿನ ಕಂದಗಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಬೆಳಕು ಶೈಕ್ಷಣಿಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ, ಶಾಲಾ ಬ್ಯಾಗ್ ಹಾಗೂ ನೋಟ್ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಸಾಪ ಮಾಜಿ ಅಧ್ಯಕ್ಷ ಎಚ್.ಜಿ. ಪಾಟೀಲ್, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗೆ ಸಂಘ-ಸಂಸ್ಥೆಗಳು ಮತ್ತು ಸಮಾಜದ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಗ್ರಾಮೀಣ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಯಶಸ್ಸು ಸಾಧಿಸಿದವರು ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದರು.
ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮೇಟಿ ಮಲ್ಲಿಕಾರ್ಜುನ ಮಾತನಾಡಿ, ಗ್ರಾಮೀಣ ಶಿಕ್ಷಣದ ಅಭಿವೃದ್ಧಿಯ ಉದ್ದೇಶದಿಂದ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಶಾಲೆಯ 94 ವಿದ್ಯಾರ್ಥಿಗಳಿಗೆ ನೋಟ್ಪುಸ್ತಕ, ಬ್ಯಾಗ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಗಿದೆ ಎಂದು ತಿಳಿಸಿದರು. ಟ್ರಸ್ಟ್ ಅಧ್ಯಕ್ಷ ಕೃಷ್ಣ ಪೂಜಾರ್, ಉಪಾಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಪರಮೇಶ್ವರ್ಪ, ಜಾತಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೈ. ನಾಗರಾಜ್, ಮಾಜಿ ಅಧ್ಯಕ್ಷ ಮೇಟಿ ದೇವೇಂದ್ರ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಐ. ವೀರಣ್ಣ ಸ್ವಾಗತಿಸಿದರು. ಶಿಕ್ಷಕ ಗಂಗಾನಾಯ್ಕ ನಿರೂಪಿಸಿ, ಪ್ರಕಾಶ್ ವಂದಿಸಿದರು. ಟ್ರಸ್ಟ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 