ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ


ಕೊಪ್ಪಳ 30: ಕೊಪ್ಪಳ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಹಾಗೂ ಕಿನ್ನಾಳ ಗ್ರಾ.ಪಂ. ವತಿಯಿಂದ  ಆಯೋಜಿಸಲಾದ "ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ" ಕಿನ್ನಾಳ ಗ್ರಾಮದಲ್ಲಿ ಯಶಸ್ವಿಯಾಗಿ ಜರುಗಿತು. 

"ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಕಳೆದ ಜು. 23 ರಿಂದ 30 ರವರೆಗೆ "ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ" ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದ್ದು, ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ವೈಯಕ್ತಿಕ ಶೌಚಾಲಯಗಳ ಬಳಕೆ ಕುರಿತು, ಘನ-ತ್ಯಾಜ್ಯ ವಿಲೇವಾರಿಯ ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಹಿನ್ನಲೆಯಲ್ಲಿ ಕಸವನ್ನು, ಒಣ ಕಸ ಹಾಗೂ ಹಸಿ ಕಸ ಪ್ರತ್ಯೇಕವಾಗಿ ಕಸ ಸಂಗ್ರಹಣೆ ವಾಹನಗಳಿಗೆ ಒದಗಿಸಲು ಹಾಗೂ ಅಂಗನವಾಡಿ ಮತ್ತು ಶಾಲಾ ವಿದ್ಯಾಥರ್ಿಗಳಿಗೆ ಶುಚಿತ್ವದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು.  ಕಿನ್ನಾಳ ಗ್ರಾ.ಪಂ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.  ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು ಎಂದು ಕಿನ್ನಾಳ ಗ್ರಾ.ಪಂ. ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.