ಹಾವೇರಿ 14 : ವಾಕರಸಾ ಸಂಸ್ಥೆಯ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸಾರಿಗೆ ಸಂಸ್ಥೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ “ನಮ್ಮ ಬಸ್ ನಿಲ್ದಾಣ, ಸ್ವಚ್ಚ ಬಸ್ ನಿಲ್ದಾಣ” ಎಂಬ ಹೆಸರಿನಲ್ಲಿ “ಕ್ಯೂ ಆರ್ ಕೋಡ್ ಮೂಲಕ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದ್ದು, ಸಾರ್ವಜನಿಕರು ಈ “ಕ್ಯೂ ಆರ್” ಕೋಡ ಬಳಸಿ ಬಸ್ ನಿಲ್ದಾಣದ ಸ್ವಚ್ಚತೆ ಬಗ್ಗೆ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಸಂಸ್ಥೆಗೆ ನೀಡಬಹುದಾಗಿದೆ ಎಂದು ಹಾವೇರಿ ವಿಭಾಗದ ಸಾರಿಗೆ ಅಧಿಕಾರಿ ಅಶೋಕ.ಆರ್.ಪಾಟೀಲ್ ಅವರು ಹೇಳಿದರು.
ಅವರು ಬುಧವಾರ ಹಾವೇರಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ನಿಲ್ದಾಣದಲ್ಲಿನ ಸಂಸ್ಥೆಯ ಸಿಬ್ಬಂದಿಗಳಿಗೆ ನಿಲ್ದಾಣದ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಲು ತಿಳಿಸಿದರು ಹಾಗೂ ಸಾರ್ವಜನಿಕರಿಗೆ ಬಸ್ ನಿಲ್ದಾಣದ ನಿರ್ವಹಣೆಯ ಕುರಿತು “ಕಿಖ”ಕೋಡ ಖಅಂಓ ಮೂಲಕ ಅಭಿಪ್ರಾಯ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಆನ್ ಲೈನ್ ಮೂಲಕ ಬಸ್ ನಿಲ್ದಾಣದ ಅಭಿಪ್ರಾಯ ಸಲ್ಲಿಸಬಹುದು ಎಂದು ತಿಳಿಸಿದರು.
ಇಡೀ ಸಾರಿಗೆ ಸಂಸ್ಥೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ಪ್ರಥಮ ಬಾರಿಗೆ ಇಂತಹ ಪ್ರಯೋಗಕ್ಕೆ ಮುಂದಾಗಿದ್ದು, ಈ ಅಭಿಯಾನದಲ್ಲಿ ಬಸ್ ನಿಲ್ದಾಣಗಳ ಸ್ವಚ್ಚತೆ, ಶೌಚಾಲಯ ನಿರ್ವಹಣೆ, ತ್ಯಾಜ್ಯ, ವಿಲೇವಾರಿ, ಶೌಚಾಲಯದ ದರ ಪಟ್ಟಿ ಅಳವಡಿಕೆ, ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಸಂಚಾರ ನಿಯಂತ್ರಕರು ಪ್ರಯಾಣಿಕರೊಂದಿಗೆ ಸೌಜನ್ಯದ ನಡವಳಿಕೆ ಇತ್ಯಾದಿ ಅಂಶಗಳ ಕುರಿತು ಮೌಲ್ಯಮಾಪನ ಮಾಡಲು ಸಾರ್ವಜನಕರಿಗೆ ಅವಕಾಶ ನೀಡಲಾಗಿದೆ ಎಂದರು.
ಅಭಿಪ್ರಾಯ ಹಾಗೂ ಸಲಹೆ ಜತೆಗೆ ಆ ಬಸ್ ನಿಲ್ದಾಣಕ್ಕೆ ರಾ್ಯಂಕ್ ಕೂಡಾ ಕೊಡಬಹುದುದು, ನೀವು ಕೊಡುವ ರಾ್ಯಂಕ್ ಆಧಾರದ ಮೇಲೆಯೇ ಉತ್ತಮ ರೀತಿಯ ಸ್ವಚ್ಚತೆ ಕಾಪಾಡುವ ಬಸ್ ನಿಲ್ದಾಣಗಳನ್ನು ಹಾಗೂ ಅಲ್ಲಿನ ಸಿಬ್ಬಂದಿಗೆ “ನಮ್ಮ ಬಸ್ ನಿಲ್ದಾಣ ಸ್ವಚ್ಚ ನಿಲ್ದಾಣ” ಎಂಬ ಶಿರ್ಷಿಕೆಯಡಿ ಬಹುಮಾನ, ಪ್ರಶಸ್ತಿಗಳನ್ನು ನೀಡಿ ಪ್ರೊತ್ಸಾಹಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ ಎಂದು ತಿಳಿಸಿದರು.