ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ಹಿ ಸಾರ್ವಜನಿಕರ ಸಹಕಾರ ಅಗತ್ಯ

ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ಹಿ ಸಾರ್ವಜನಿಕರ ಸಹಕಾರ ಅಗತ್ಯ  Cleanliness drive launched at Gajendragad bus station; public cooperation is essential

ಲೋಕದರ್ಶನ ವರದಿ 

ಗಜೇಂದ್ರಗಡ, ಜು.04: ನಿರಂತರ ಮಳೆ ನಡುವೆಯೂ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಯಿತು. ಮಳೆ ಇದ್ದರೂ ಸಾರ್ವಜನಿಕ ಸೇವೆಯ ಉದ್ದೇಶದಿಂದ ಕಾರ್ಯಕರ್ತರು ಮತ್ತು ಅಧಿಕಾರಿಗಳು ಶ್ರಮದಾನದಲ್ಲಿ ಭಾಗವಹಿಸಿದರು.  ಕಾರ್ಯಕ್ರಮವನ್ನು ತಾ.ಪಂ. ಇಓ ಚಂದ್ರಶೇಖರ್ ಕಂದಕೂರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಆಗಿದ್ದು, ಸ್ವಚ್ಛತೆಯ ಅಭಿಯಾನ ಯಶಸ್ವಿಯಾಗಲು ಜನರ ಸಹಕಾರ ಅಗತ್ಯವೆಂದು ಹೇಳಿದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿ, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅವಶ್ಯಕ ಎಂದು ತಿಳಿಸಿದರು. ಪುರಸಭೆ ಹಾಗೂ ಪಂಚಾಯತ್‌ಗಳು ಸೇರಿ ಕಸದ ಸರಿಯಾದ ವಿಲೇವಾರಿ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಶ್ರಮದಾನದ ಭಾಗವಾಗಿ ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಕಸವನ್ನು ಸಂಗ್ರಹಿಸಿ ಸರಿಯಾಗಿ ವಿಲೇವಾರಿ ಮಾಡುವ ಬಗ್ಗೆ ಅಧಿಕಾರಿಗಳು ಗಮನ ಹರಿಸಿದರು. ಈ ಸಂದರ್ಭದಲ್ಲಿ ಓಘಏಖಖಿಅ ಅಧಿಕಾರಿಗಳು, ತಾಲೂಕು ಪಂಚಾಯತ್ ಸಿಬ್ಬಂದಿ, ಪುರಸಭೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದರು.