ರಸ್ತೆ ಗುಂಡಿ ಮುಚ್ಚಿಸಿ, ಅವಘಡಗಳನ್ನು ತಪ್ಪಿಸಿ: ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್
Close potholes and avoid accidents: Deputy Commissioner M.S. Diwakar in the meeting
ವಿಜಯನಗರ(ಹೊಸಪೇಟೆ) 23: ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳ ಮೇಲಿನ ಗುಂಡಿಗಳನ್ನು ಗುರುತಿಸಿ ಶೀಘ್ರವೇ ಮುಚ್ಚುವ ಮೂಲಕ ಅವಘಡಗಳನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪಿಡಬ್ಲೂಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರಿ್ಡಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಅವರು ಮಾತನಾಡಿದರು. ಈಚೇಗೆ ರಸ್ತೆಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಮಳೆಯಿಂದಾಗಿ ರಸ್ತೆಗಳ ಮೇಲೆ ನೀರು ನಿಂತು ಗುಂಡಿಗಳು ಕಾಣದೇ ಸವಾರರು ಅವಘಡಗಳನ್ನು ಅನುಭವಿಸುತ್ತಿದ್ದಾರೆ. ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಕಾಮಗಾರಿಗಳು ನಡೆಯದೇ ಅನೇಕ ದುರ್ಘಟನೆಗಳು ಸಂಭವಿಸಿವೆ. ಈಗಲಾದರೂ ಎಚ್ಚೆತ್ತು ಅಧಿಕಾರಿಗಳು ರಸ್ತೆಗಳ ನಿರ್ವಹಣೆಗೆ ಕಾರ್ಯೋನ್ಮುಖರಾಗಬೇಕು. ಎನ್‌ಎಚ್‌ಎಐ ಅಧಿಕಾರಿಗಳ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 6 ಕಡೆ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಈಗಾಗಲೇ 5 ಬ್ಲಾಕ್ ಸ್ಪಾಟ್‌ಗಳನ್ನು ಸರಿಪಡಿಸಲಾಗಿದೆ ಎಂದು ವರದಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಎಂ ಕಂಪನಿ ಮುಂದಿನ ಡಣಾಪುರ ಕ್ರಾಸ್ ಬಳಿಯ ವಿದ್ಯುತ್ ದೀಪಗಳಿಲ್ಲದೇ ಕತ್ತಲು ಆವರಿಸಿದೆ. ಅದೇ ರಸ್ತೆಯಲ್ಲಿ ಬರುವ ಆರು ಹಳ್ಳಿಗಳಿಗೆ ಸಂಪರ್ಕಿಸುವ ರಸ್ತೆ ಮಾರ್ಗದಲ್ಲಿ ವಿದ್ಯುತ್ ದೀಪ ಇಲ್ಲದೇ ರಸ್ತೆ ಸಂಚಾರಕ್ಕೆ ತೊಂದರೆ ಆಗಿದೆ ಕೂಡಲೇ ವಿದ್ಯುತ್ ದೀಪಗಳನ್ನು ಅಳವಡಿಸಲು ಕ್ರಮವಹಿಸಬೇಕು. ಅರಸೀಕೆರೆಯಿಂದ ಮತ್ತಿಹಳ್ಳಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಎರಡು ಕಿಲೋಮೀಟರ್ ನಷ್ಟು ರಸ್ತೆ ವಾಹನಗಳು ಸಂಚರಿಸಲು ಸಂಪೂರ್ಣ ಹದಗೆಟ್ಟಿದೆ ಶೀಘ್ರ ರಸ್ತೆ ಕಾಮಗಾರಿ ಸರಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಸೇವಾ ರಸ್ತೆಗಳಲ್ಲಿ ಸೂಕ್ತ ನಾಮಫಲಕಗಳು, ರಸ್ತೆ ಅಡೆತಡೆಗಳನ್ನು ಅಳವಡಿಸಬೇಕು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು.ಬಿ.ಎಲ್ ಮಾತನಾಡಿ, ಡಾ.ಪುನೀತ್ ರಾಜಕುಮಾರ ವೃತ್ತದ ಬಳಿ ನಾಲ್ಕು ಚಕ್ರದ ವಾಹನಗಳ ಪಾರ್ಕಿಂಗ್ ನಿಯೋಜಿಸಬೇಕಿದೆ. ಹೊಸಪೇಟೆ ನಗರದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಬರುವ ಟನಲ್ ನಲ್ಲಿ ಸಿಸಿ ಕ್ಯಾಮರಾಗಳನ್ನು ಆಳವಡಿಸಲು ಕ್ರಮವಹಿಸಬೇಕು. ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ರಸ್ತೆಗೆ ಅಡ್ಡಲಾಗಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸಬೇಕು. ಹೊಸಪೇಟೆ, ಹರಪನಹಳ್ಳಿ, ಕೂಡ್ಲಿಗಿ, ಹಾಗೂ ಹಗರಿಬೊಮ್ಮನಹಳ್ಳಿಯಲ್ಲಿ ಆಟೋ ನಿಲ್ದಾಣ ನಿರ್ಮಾಣ ಮಾಡಲು ಸಂಬಂಧಿಸಿದ ಉಪವಿಭಾಗದ ಅಧಿಕಾರಿಗಳು ಮತ್ತು ಟ್ರಾಫಿಕ್ ಪೊಲೀಸರು ಜಂಟಿಯಾಗಿ ಸ್ಥಳ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹೊಸಪೇಟೆ ನಗರದಲ್ಲಿ ಒಟ್ಟು 20 ಆಟೋ ಸ್ಟಾಂಡ್‌ಗಳನ್ನು ಗುರುತಿಸಿದ್ದು, ಈಗಾಗಲೇ 10 ಹಂತಗಳಲ್ಲಿ ನಿರ್ಮಿಸಲು ಸೂಚಿಸಿದರು. ಮೊದಲ ಹಂತದಲ್ಲಿ ಪ್ರತಿಯೊಂದು ಸ್ಟಾಂಡ್‌ಗಳಲ್ಲಿ ಕನಿಷ್ಠ 10-15 ಆಟೋಗಳನ್ನು ನಿಲ್ಲಿಸಲು ಅನುಕೂಲ ಕಲ್ಪಿಸಬೇಕಿದೆ ಎಂದರು.
ಸಭೆಯಲ್ಲಿ ಸಾರಿಗೆ ಇಲಾಖೆ, ಪಿಡಬ್ಲೂಡಿ, ಎನ್‌ಎಚ್‌ಎಐ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 