ಬಳ್ಳಾರಿ 20: ಮಾಧ್ಯಮಗಳಲ್ಲಿ ವರದಿಯಾದಂತೆ ರಾಜ್ಯ ಸರ್ಕಾರವು 6,000 ಶಾಲೆಗಳನ್ನು ವೀಲೀನದ ಹೆಸರಿನಲ್ಲಿ ಮುಚ್ಚುತ್ತಿರುವುದು ಶಿಕ್ಷಣ ವಿರೋಧಿ ನಿಲುವಾಗಿದೆ.
ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ರಾಜ್ಯದ ವಿದ್ಯಾರ್ಥಿಗಳ ಹಾಗೂ ಪೋಷಕರ ವ್ಯಾಪಕ ಪ್ರತಿರೋಧದ ನಡುವೆಯೂ ಶಾಲೆಗಳನ್ನು ಮುಚ್ಚುತ್ತಿರುವುದು ರಾಜ್ಯ ಸರ್ಕಾರದ ಭಂಡತನವನ್ನು ಎತ್ತಿ ತೋರಿಸಿದೆ. ಯಾವುದೇ ಪ್ರಜಾತಾಂತ್ರಿಕ ಪ್ರಕ್ರಿಯೆಯನ್ನು ಅನುಸರಿಸಿದೆ ಏಕಾಏಕಿ ಶಾಲೆಗಳನ್ನು ಮುಚ್ಚುತ್ತಿರುವ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಎಲ್ಲಾ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೋರಾಟಕ್ಕೆ ಧುಮುಕಬೇಕೆಂದು ಎ.ಐ.ಡಿ.ಎಸ್.ಓ ಜಿಲ್ಲಾ ಸಮಿತಿಯು ಕರೆ ನೀಡುತ್ತದೆ ಎಂದು ಎಐಡಿಎಸ್‌ಓ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ತಿಳಿಸಿದ್ದಾರೆ