ಹಾವೇರಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಮೋಡ ಬಿತ್ತನೆ : ಸಚಿವ ಸತೀಶ ಜಾರಕಿಹೊಳಿ
Cloud seeding across Haveri district for three days: Minister Satish Jarkiholi
ಲೋಕದರ್ಶನ ವರದಿ
ಹುಬ್ಬಳ್ಳಿ ಜು.6: ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಮೋಡ ಬಿತ್ತನೆಗೆ ಮುಂದಾಗಿದ್ದಾರೆ. ಹಾವೇರಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಮಳೆ ಕೊರತೆ ಉಂಟಾಗಿರುವುದರಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಮುಂಗಾರು ಮಳೆ ಕೊರತೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿದೆ. ಮುಂಗಾರು ಬೆಳೆ ಹಾನಿ ಕುರಿತು ಸರ್ವೇ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೋಡ ಬಿತ್ತನೆಗೆ ಮುಂದಾಗಿರುವ ಎಲ್ಲಾ ಶಾಸಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು. ಶಾಸಕರಾದ ಪ್ರಕಾಶ ಕೋಳಿವಾಡ ಅವರು ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮಳೆ ಕೊರತೆಯಾಗಿರುವುದರಿಂದ ಹಾವೇರಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲಾಗುತ್ತಿದೆ. ಜುಲೈ ತಿಂಗಳು ಪೂರ್ತಿ ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ವಿಮಾನ ಇರಲಿದೆ. ವಿಜ್ಞಾನಿಗಳು ಸೂಚಿಸಿದರೆ ಮುಂದಿನ ದಿನಗಳಲ್ಲಿ ಮೋಡ ಬಿತ್ತನೆ ಮಾಡಲಾಗುವುದು. 1 ಗಂಟೆ ಮೋಡ ಬಿತ್ತನೆ ಮಾಡಲು ರೂ.15 ಲಕ್ಷ ವೆಚ್ಚವಾಗಲಿದೆ. ಮೋಡ ಬಿತ್ತನೆಯಿಂದ ರೈತರ ಬೆಳೆಗಳಿಗೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 