ಪೌರ ಕಾರ್ಮಿಕರ ಹೋರಾಟಕ್ಕೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಬೆಂಬಲ
Coalition of pro-Kannada organizations supports the struggle of civic workers
ಘಟಪ್ರಭಾ, 01 : ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ(ರಿ)ಬೆಂಗಳೂರು ರಾಜ್ಯಾದ್ಯಂತ ವಿವಿಧ ಬೇಡಿಕೆಗಳು ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡ ಹಿನ್ನಲೆ ಇಂದು ಘಟಪ್ರಭಾ ಪುರಸಭೆಯ ಪೌರಸೇವಾ ನೌಕರರು ಸೇರಿ ಅನಿರ್ದಿಷ್ಟಾವಧಿ ಮುಷ್ಕರದ ಹೋರಾಟಕ್ಕೆ ರವಿವಾರದಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ ತಾಲೂಕ ಘಟಕದ ವತಿಯಿಂದ ಬೆಂಬಲ ಸೂಚಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ ಅವರು ಪೌರ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಈ ಕೂಡಲೇ ಪೌರ ಕಾರ್ಮಿಕರ ಬೇಡಿಕೆಗಳನ್ನು ಆದಷ್ಟು ಬೇಗ ಪರಿಹರಿಸಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ನಂತರ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ(ಸಂತೋಷ್ರ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ ಅವರು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಹಲವಾರು ಬೇಡಿಕೆಗಳು ಸುಮಾರು ವರ್ಷಗಳಿಂದ ಬಾಕಿ ಉಳಿದಿದ್ದು ಸದರಿ ಈ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧ ಪಟ್ಟ ಇಲಾಖೆ ಸಚಿವರು ಈ ಕೂಡಲೇ ಇವರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ರಾಜ್ಯಾಧ್ಯಕ್ಷ ಕೆ.ಕೆ ಪಟ್ಟಣಶೆಟ್ಟಿ, ಕನ್ನಡ ಸೇನೆ ಗೋಕಾಕ ತಾಲೂಕಾಧ್ಯಕ್ಷ ಅಪ್ಪಾಸಾಹೇಬ ಮುಲ್ಲಾ, ಕನ್ನಡ ರಕ್ಷಣಾ ವೇದಿಕೆ ಮೂಡಲಗಿ ತಾಲೂಕಾ ಉಸ್ತುವಾರಿ ಅಧ್ಯಕ್ಷ ರಾಘವೇಂದ್ರ ಕುಡೆಮ್ಮೆ, ಮೂಡಲಗಿ ತಾಲೂಕ ಉಪಾಧ್ಯಕ್ಷ ಶಿವರಾಜ ಚಿಗದೊಳ್ಳಿ, ಕರವೇ ಘಟಪ್ರಭಾ ನಗರ ಘಟಕ ಅಧ್ಯಕ್ಷ ಯಲ್ಲಪ್ಪ ಅಟ್ಟಿಮಿಟ್ಟಿ ರಮೇಶ ತಂಗೆವ್ವಗೋಳ, ನಿಜಲಿಗೇಶ್ವರ ಮಾಲದಿನ್ನಿ, ಮಹಾಂತೇಶ್ ದೊಡ್ಡಲಿಂಗಪ್ಪಗೊಳ ಹಾಗೂ ಎಲ್ಲ ಪೌರ ಕಾರ್ಮಿಕರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 