ಮಂಗಳೂರಿನಲ್ಲಿ ಕರಾವಳಿ ಉತ್ಸವ

ಮಂಗಳೂರು, ಜ 8 ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೇ 10ರಿಂದ 19ರವರೆಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕರಾವಳಿ ಉತ್ಸವ ಆಯೋಜಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬುಧವಾರ ಪ್ರಕಟಿಸಿದರು. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಚಿವರು, ಕರಾವಳಿ ಉತ್ಸವ ಉದ್ಘಾಟನೆಯ ಸಂಕೇತವಾಗಿ ಜನವರಿ 10 ರಂದು ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದ ವರೆಗೆ ಮೆರವಣಿಗೆ ನಡೆಸಲಿದೆ. ಮೆರವಣಿಗೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆ ಕರಾವಳಿ ಉತ್ಸವದ ಭಾಗವಾಗಿ ಜನವರಿ 17,18 ಹಾಗೂ 19 ರಂದು ಪಣಂಬೂರು ಬೀಚ್ ನಲ್ಲಿ ಬೀಚ್ ಉತ್ಸವ ಹಾಗೂ ಗಾಳಿ ಪಟ ಉತ್ಸವ ಆಯೋಜಿಸಲಾಗಿದೆ ಎಂದರು. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯಿತ್ ಅಧ್ಯಕ್ಷ ಮೀನಾಕ್ಷಿ ಶಾಂತಿಗೌಡ, ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತಿತತರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.