ಚಿಗಳ್ಳಿ ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನಾಗರಹಾವು: ವಿದ್ಯಾರ್ಥಿಗಳಲ್ಲಿ ಆತಂಕ
Cobra enters Chigalli Government High School: Students worried
ಲೋಕದರ್ಶನ ವರದಿ
ಮುಂಡಗೋಡ 13 : ತಾಲೂಕಿನ ಚಿಗಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಬೆಳಿಗ್ಗೆ ತರಗತಿ ಕೊಠಡಿಯೊಳಗೆ ನಾಗರಹಾವು ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಸಂತೋಷ ಆಲದಕಟ್ಟಿ ಅವರು ಘಟನೆ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಹಳ್ಳಿ ಗಸ್ತು ಅರಣ್ಯ ಪಾಲಕರಾದ ಮುತ್ತುರಾಜ ಅವರು ಸ್ಥಳಕ್ಕೆ ಆಗಮಿಸಿ ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಣೆ ಮಾಡಿದರು.ಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಇರಿಸಲಾಗಿತ್ತು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹಾವನ್ನು ಯಾವುದೇ ಹಾನಿಯಾಗದಂತೆ ಹಿಡಿದು ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 