ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೌಡಳ್ಳಿಯಲ್ಲಿ ನಾಗರಹಾವು ಪತ್ತೆ: ಸುರಕ್ಷಿತವಾಗಿ ಮರಳಿ ಕಾಡಿಗೆ
Cobra found at Government Higher Primary School, Chaudalli: Safely returned to the forest
ಮುಂಡಗೋಡ 15 : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೌಡಳ್ಳಿಯಲ್ಲಿ ನಾಗರಹಾವು ಶಾಲಾ ಆವರಣಕ್ಕೆ ನುಗ್ಗಿದ ಘಟನೆ ನಡೆದಿದೆ. ಹಾವನ್ನು ಗಮನಿಸಿದ ವಿದ್ಯಾರ್ಥಿಗಳು ಭಯಗೊಂಡು ತಕ್ಷಣ ತರಗತಿಗಳಿಂದ ಹೊರಗುಳಿದ ಕಾರಣ ಶಾಲೆಯಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಘಟನೆಯ ಮಾಹಿತಿ ತಿಳಿದ ಕೂಡಲೇ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ ಪೂಜಾರ ಅವರು ಮುತ್ತುರಾಜ ಹಳ್ಳಿ ಗಸ್ತು ವನಪಾಲಕರಿಗೆ ತುರ್ತು ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ. ಕರೆ ಸ್ವೀಕರಿಸಿದ ಗಸ್ತು ವನಪಾಲಕರು ಕಾತುರ ವಲಯ ಅರಣ್ಯಾಧಿಕಾರಿ ಶ್ರೀ ವಿರೇಶ ಅವರ ಮಾರ್ಗದರ್ಶನದಲ್ಲಿ ತಕ್ಷಣ ಶಾಲೆಗೆ ಆಗಮಿಸಿದರು. ಅರಣ್ಯ ಇಲಾಖೆಯ ತಂಡವು ಅತ್ಯಂತ ಜಾಗ್ರತೆ ಮತ್ತು ಪರಿಣಿತಿಯಿಂದ ಹಾವನ್ನು ಸುರಕ್ಷಿತವಾಗಿ ಹಿಡಿದು ಸಮೀಪದ ಅರಣ್ಯ ಪ್ರದೇಶಕ್ಕೆ ಬಿಡುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಯಾವುದೇ ವಿದ್ಯಾರ್ಥಿ ಅಥವಾ ಸಿಬ್ಬಂದಿಗೆ ಅಪಾಯವಾಗದಂತೆ ಸಂಪೂರ್ಣ ಕಾರ್ಯಾಚರಣೆ ನೆರವೇರಿಸಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 