ಬಿಎಲ್ಡಿಇ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಯಶಸ್ವಿ
Cochlear implant switch-on successful at BLDE Hospital
ವಿಜಯಪುರ 19 : ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ ನಡೆಯಿತು. ಇಂದು ಶುಕ್ರವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಗುವಿನ ಸ್ವಿಚ್ ಆನ್ ಮಾಡಲಾಯಿತು.
ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಆಸ್ಪತ್ರೆಯ ಅಧೀಕ್ಷಕ ಡಾ. ಸಂಜೀವ ಬೆಂಟೂರ, ಹಿರಿಯ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಕಾಕ್ಲಿಯರ್ ಇಂಪ್ಲಾಂಟ್ ಸಮನ್ವಯ ಅಧಿಕಾರಿ ಡಾ. ಎಚ್. ಟಿ. ಲತಾದೇವಿ ಹಾಗೂ ಇನ್.ಎನ್.ಟಿ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಕರಡಿ ಉಪಸ್ಥಿತರಿದ್ದರು.ಹುಟ್ಟು ಕಿವುಡುತನದಿಂದ ಬಳಲುತ್ತಿದ್ದ ಈ ಮಗುವಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಸ್ವಿಚ್ ಆನ್ ಪ್ರಕ್ರಿಯೆಯ ಮೂಲಕ ಮೊದಲ ಬಾರಿಗೆ ಧ್ವನಿಯನ್ನು ಆಲಿಸುವ ಅನುಭವವನ್ನು ಮಗು ಪಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಡಾ. ಅರುಣ ಚಂ. ಇನಾಮದಾರ, ವೈದ್ಯರ ಪರಿಣತಿ, ಪಾಲಕರ ಸಹಕಾರ ಹಾಗೂ ಆಸ್ಪತ್ರೆಯ ಸೌಲಭ್ಯಗಳ ಸಮನ್ವಯದಿಂದ ಇಂಥ ಜೀವಿತ ಪರಿವರ್ತನೆಯ ಚಿಕಿತ್ಸೆಗಳು ಸಾಧ್ಯವಾಗುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ವೈದ್ಯರು ಮತ್ತು ಸಿಬ್ಬಂದಿಯನ್ನು ಅವರು ಅಭಿನಂದಿಸಿದರು. ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯ ಕುರಿತು ಮಾಹಿತಿ ನೀಡಿದ ಡಾ. ಎಚ್. ಟಿ. ಲತಾದೇವಿ, ಶಸ್ತ್ರಚಿಕಿತ್ಸೆಯ ನಂತರ ಎರಡು ವರ್ಷಗಳ ಕಾಲ ವಾಕ್-ಶ್ರವಣ ತರಬೇತಿ ನೀಡಲಾಗುತ್ತದೆ. ಇದರ ಮೂಲಕ ಮಗು ಸಾಮಾನ್ಯ ಮಕ್ಕಳಂತೆ ಶಿಕ್ಷಣ ಪಡೆದು ಜೀವನದ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳ ಪಾಲಕರಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 