ಜಿಲ್ಲೆಯಲ್ಲಿ ಲಭ್ಯವಿರುವ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳ ಸಂಗ್ರಹ

ಜಿಲ್ಲೆಯಲ್ಲಿ ಲಭ್ಯವಿರುವ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳ ಸಂಗ್ರಹ Collection of old handwritten texts, manuscripts and documents available in the district

                                             ಸಾರ್ವಜನಿಕರು ಸಹಕಾರ ನೀಡಲು ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಮನವಿ 

ಧಾರವಾಡ 26: ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಸಂಗ್ರಹಿಸಿ, ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಅವುಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮಲ್ಲಿ ಇಂತಹ ಹಳೆಯ ಕೈಬರಹ, ಹಸ್ತಪ್ರತಿ, ದಾಖಲೆಗಳು ಲಭ್ಯವಿದ್ದರೆ ಮಾಹಿತಿ ನೀಡಿಬೇಕು. ಸಮೀಕ್ಷೆದಾರರು ತಮ್ಮಲ್ಲಿಗೆ ಬಂದು ದಾಖಲಿಸಿಕೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯು ಮಹತ್ವದ್ದಾಗಿದೆ. ಜಿಲ್ಲೆಯಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಸಂಗ್ರಹಿಸಿ, ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಅವುಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ. 

ಐತಿಹಾಸಿಕ ದಾಖಲೆಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುವಾದ ಮತ್ತು ಪ್ರಕಟಣೆಯನ್ನು ಮಾಡುವ ಮೂಲಕ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತದೆ.  ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆಗೆ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ಡಿಜಿಟಲೀಕರಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಇಡೀ ದೇಶದಲ್ಲಿರುವ ಹಸ್ತಪ್ರತಿಗಳ ಮಾಹಿತಿಯನ್ನು ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಷನ್ನಲ್ಲಿ ಕೇಂದ್ರ ಸರ್ಕಾರವು ಅಪ್ಲೋಡ್ ಮಾಡುವ ದತ್ತಾಂಶದ ಮಾಹಿತಿಯನ್ನು ವಿಶ್ವಕ್ಕೆ ಹಂಚಿಕೊಳ್ಳುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಈ ಮಹತ್ವ ಪೂರ್ಣವಾದ ಜ್ಞಾನ ಭಾರತಂ ಮಿಷನ್ ಯೋಜನೆಯೊಂದಿಗೆ ರಾಜ್ಯ ಸರ್ಕಾರವು ಕೈಜೋಡಿಸುವ ಸಲುವಾಗಿ ರಾಜ್ಯದಾದ್ಯಂತ ಹಸ್ತಪ್ರತಿಗಳ ಸಮೀಕ್ಷ ಕಾರ್ಯವನ್ನು ಪ್ರಾರಂಭಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆಯ ಸಮನ್ವಯವನ್ನು ಸುಗಮಗೊಳಿಸಲು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸ್ಥಾಯಿ ಸಮಿತಿಯನ್ನು ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚನೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಸಮಿತಿಯು ಮೇಲ್ವಿಚಾರಣೆ ಮಾಡುತ್ತದೆ. 

ನಮ್ಮ ಜಿಲ್ಲೆಯಲ್ಲಿನ ವಿಶ್ವವಿದ್ಯಾಲಯಗಳು, ವಸ್ತುಸಂಗ್ರಹಾಲಯಗಳು, ಸಂಘ-ಸಂಸ್ಥೆಗಳು, ಮಠಗಳು ಮತ್ತು ವ್ಯಕ್ತಿಗಳ ಬಳಿ ಇರುವಂತಹ ಹಸ್ತಪ್ರತಿಗಳನ್ನು ದಾಖಲೀಕರಣಗೊಳಿಸಬೇಕಾಗಿದೆ. ಈ ಮಹತ್ವದ ಕಾರ್ಯಕ್ಕೆ ಎಲ್ಲ ಶೈಕ್ಷಿಕ ಸಂಸ್ಥೆಗಳು, ಖಾಸಗಿ ಸಂಶೋಧನಾ  ಕೇಂದ್ರಗಳು, ಸಂಘ, ಸಂಸ್ಥೆಗಳು, ಮಠಗಳು ಮತ್ತು ದಾಖಲೆ ಹೊಂದಿರುವ  ವ್ಯಕ್ತಿ, ಕುಟುಂಬಗಳು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವ ಅಗತ್ಯವಿದೆ. ಎಲ್ಲರೂ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್‌. ಆರ್‌.ಅವರು ಮನವಿ ಮಾಡಿದ್ದಾರೆ. ಜ್ಞಾನ ಭಾರತಂ ಮಿಷನ್ ಯೋಜನೆಯ ಜಿಲ್ಲಾ ಸಂಯೋಜಕರು: ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಜಿಲ್ಲೆಯಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಸಂಗ್ರಹಿಸಿ, ಇಂದಿನ ತಂತ್ರಜ್ಞಾನ ಮೂಲಕ ಶಾಶ್ವತವಾಗಿ ಉಳಿಸಲು ಅವುಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದೆ.

ಈ ಕಾರ್ಯದ ಜಿಲ್ಲಾ ಸಂಯೋಜಕರಾಗಿ ವಿದ್ವಾನ್ ಬಸವರಾಜ ಆರೇರ್ (ಮೊ:08762724469), ಡಾ. ಶ್ರೀಧರ ಇನಾಮದಾರ್ (ಮೋ:9449742466) ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾಗಿ ಡಾ.ಗೀರೀಧರ ಕಿನ್ನಾಳ (ಮೋ.8317428204), ಪಂಡಿತ ಪೂರ್ಣಪ್ರಜ್ಞಾ ಮಳಗಿ (ಮೋ.8277077111), ಡಾ. ವೆಂಕಟೇಶ ಆಚಾರ್ಯ ಬಿ.ಡಿ.(ಮೋ.9448863064) ಹಾಗೂ ಡಾ. ಪದ್ಮಾವತಿ ಎಂ. ಸಿಂಗರಿ (ಮೋ.9035919598) ಇವರನ್ನು ಸರ್ಕಾರ ನೇಮಿಸಿದ್ದು, ಸಾರ್ವಜನಿಕರು ತಮ್ಮಲ್ಲಿರುವ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳ ಬಗ್ಗೆ ಮಾಹಿತಿ ನೀಡಬೇಕೆಂದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಅವರು ತಿಳಿಸಿದ್ದಾರೆ. ಜ್ಞಾನ ಭಾರತಂ ಮಿಷನ್ ಯೋಜನೆಯ ಉದ್ದೇಶ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಬೆಂಗಳೂರು, ಸಂಸ್ಕೃತಿ ಪ್ರತಿಷ್ಠಾನ, ಮೈಸೂರು, ಸಂಸ್ಥೆಗಳನ್ನು ಕ್ಲಸ್ಟರ್ ಕೇಂದ್ರಗಳಾಗಿ ಮತ್ತು ತಾರಾ ಪ್ರಕಾಶನ, ಬೆಂಗಳೂರು, ಇವರನ್ನು ಸ್ವತಂತ್ರ ಕೇಂದ್ರವನ್ನಾಗಿ ಆಯ್ಕೆಗೊಂಡು ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಒಡಂಬಡಿಕೆ  ಮಾಡಿಕೊಂಡಿದ್ದಾರೆ.