ಆ. 9ರಿಂದ 11ರವರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ
Collection of opinions for the selection of Block Congress Presidents from August 9 to 11
ಗದಗ, ಆ. 08: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸೂಚನೆಯಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿಗಾಗಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಘಟಕಗಳ ವ್ಯಾಪ್ತಿಯಲ್ಲಿ ಆ. 9ರಿಂದ 11ರವರೆಗೆ ಅಭಿಪ್ರಾಯ ಸಂಗ್ರಹ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ವಿವೇಕ್ ಬನ್ಸಾಲ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ್ ಮೆಹರವಾಡೆ ಹಾಗೂ ರಾಬರ್ಟ್ ದದ್ದಾಪುರಿ ಅವರನ್ನು ಸಹ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವೀಕ್ಷಕರು ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ.
ಆ. 9ರಂದು ಬೆಳಗ್ಗೆ 10ಕ್ಕೆ ಶಿರಹಟ್ಟಿ ಬ್ಲಾಕ್, ಮಧ್ಯಾಹ್ನ 1ಕ್ಕೆ ಲಕ್ಷ್ಮೇಶ್ವರ ಬ್ಲಾಕ್ ಹಾಗೂ ಸಂಜೆ 4ಕ್ಕೆ ಮುಂಡರಗಿ ಬ್ಲಾಕ್ನಲ್ಲಿ ಅಭಿಪ್ರಾಯ ಸಂಗ್ರಹ ಸಭೆಗಳು ನಡೆಯಲಿವೆ.
ಆ. 10ರಂದು ಬೆಳಗ್ಗೆ 10ಕ್ಕೆ ರೋಣ ಮತ್ತು ನರೇಗಲ್ ಬ್ಲಾಕ್ಗಳಲ್ಲಿ, ಮಧ್ಯಾಹ್ನ 2ಕ್ಕೆ ಹೊಳೆಆಲೂರು ಬ್ಲಾಕ್ನಲ್ಲಿ ಹಾಗೂ ಸಂಜೆ 4ಕ್ಕೆ ನರಗುಂದ ಬ್ಲಾಕ್ನಲ್ಲಿ ಸಭೆಗಳು ನಡೆಯಲಿವೆ.
ಆ. 11ರಂದು ಬೆಳಗ್ಗೆ 11ಕ್ಕೆ ಗದಗ ಮತ್ತು ಮುಳಗುಂದ ಬ್ಲಾಕ್ ಕಾಂಗ್ರೆಸ್ ಘಟಕಗಳ ವ್ಯಾಪ್ತಿಯಲ್ಲಿ ಅಭಿಪ್ರಾಯ ಸಂಗ್ರಹ ಸಭೆ ನಡೆಯಲಿದೆ.
ವೀಕ್ಷಕ ವಿವೇಕ್ ಬನ್ಸಾಲ್ ಹಾಗೂ ಸಹವೀಕ್ಷಕರಾದ ಮಲ್ಲಿಕಾರ್ಜುನ ಅಕ್ಕಿ, ಸತೀಶ್ ಮೆಹರವಾಡೆ ಮತ್ತು ರಾಬರ್ಟ್ ದದ್ದಾಪುರಿ ಅವರು ಪ್ರತಿ ಬ್ಲಾಕ್ನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ನೀಡಬೇಕು ಎಂದು ಜಿ.ಎಸ್. ಪಾಟೀಲ ಮನವಿ ಮಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಆಸಕ್ತರು ತಮ್ಮ ಸ್ಥಾನಗಳಿಗೆ ಅರ್ಜಿ ಸಲ್ಲಿಸುತ್ತಿದ್ದು, ಇನ್ನೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 