ಸ್ವಚ್ಛ ಮತದಾರ ಪಟ್ಟಿ ತಯಾರಿಕೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕರೆ
Collector Nagendra Prasad called for preparation of clean voter list
ಬಳ್ಳಾರಿ 11: ರಾಜ್ಯದಲ್ಲಿಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮ್ಯಾಪಿಂಗ್ ಕಾರ್ಯದಲ್ಲಿ ಬಳ್ಳಾರಿ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಸ್ವಚ್ಛ ಮತದಾರ ಪಟ್ಟಿ ಸಿದ್ಧಗೊಳಿಸುವುದಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದರು.ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಕುರುಗೋಡು ತಾಲೂಕು ಆಡಳಿತದಿಂದ ಬಿಎಲ್ಒ ಮತ್ತು ಬಿಎಲ್ಒ ಮೇಲ್ವಿಚಾರಕರಿಗೆ ಗುರುವಾರ ಆಯೋಜಿಸಿದ್ದ ಎಸ್ಐಆರ್ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಸ್ಐಆರ್ ಒಂದು ಮತದಾರ ಪಟ್ಟಿ ಶುದ್ಧಿಗೊಳಿಸುವ ಪ್ರಕ್ರಿಯೆ ಆಗಿದ್ದು, ಅರ್ಹರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಬಿಎಲ್ಒ ಗಳು ಜೂ.20 ರಿಂದ ಜು.30 ರವರೆಗೆ ಕಾಲಮಿತಿ ನೀಡಲಾಗಿದ್ದು, ಮತದಾರರ ಮನೆ ಬಾಗಿಲಿಗೆ ಕನ್ನಡದಲ್ಲಿ ಇರುವ ಗಣತಿ ನಮೂನೆ ತಲುಪಿಸಬೇಕು. ಮತದಾರರ ಹೆಸರು, ಎಪಿಕ್ ಸಂಖ್ಯೆ, ಸಂಬಂಧಿಕರ ಹೆಸರು ಹಾಗೂ ವಿಧಾನಸಭಾ ಕ್ಷೇತ್ರದ ವಿವರಗಳು ಇರಲಿವೆ. ಬಿಎಲ್ಒಗಳು ಮನೆಗಳಿಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ, ಗಣತಿ ನಮೂನೆ ತಲುಪಿದ ನಂತರ ವಿವರ ಸರಿಯಾಗಿವೆಯೇ ಎಂಬುದು ಮತದಾರರಿಂದ ದೃಢೀಕರಿಸಿಕೊಂಡು ಸಹಿ ಪಡೆದು ವಾಪಸ್ ತರಬೇಕು.
ಆ.5 ರಿಂದ ಅಕ್ಟೋಬರ್ 3ರವರೆಗೆ ನೋಟಿಸ್ ಹಂತ ಹಾಗೂ ಹಕ್ಕು ಮತ್ತು ಆಕ್ಷೇಪಣೆ ವಿಲೇವಾರಿ ಮಾಡಲಾಗುವುದು, ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.ಸ್ಮಾರ್ಟ್ ಫೋನ್ ಬಳಸದವರಿಗೆ ನಮೂನೆ ಸಲ್ಲಿಸಲು ಆಯ್ದಾ ಬಿಎಲ್ಒ ಕೇಂದ್ರ ತೆರೆದು ಸಿಬ್ಬಂದಿ ನೀಡಲಾಗುವುದು. ಜತೆಗೆ ಪದೇ ಪದೆ ಕೇಳಬಹುದಾದ ಮಾದರಿ ಪ್ರಶ್ನೆ ಸಿದ್ಧಪಡಿಸಿ ಎಲ್ಲರಿಗೂ ತಲುಪಿಸಲಾಗುತ್ತದೆ ಎಂದು ತಿಳಿಸಿದರು.
ಮತಗಟ್ಟೆ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯ ಮೂಲ ಸ್ತಂಭಗಳಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರ ಹೆಸರನ್ನು ಪಟ್ಟಿಗೆ ಸೇರಿಸುವಲ್ಲಿ ಅವರ ಪಾತ್ರ ಅತ್ಯಂತ ಹಿರಿದಾಗಿದೆ ಎಂದರು.ಮತದಾರರ ಪಟ್ಟಿಯಲ್ಲಿ ಹೊಸ ಹೆಸರು ಸೇರೆ್ಡ, ತಿದ್ದುಪಡಿ ಹಾಗೂ ಸ್ಥಳಾಂತರಕ್ಕಾಗಿ ನಮೂನೆ 6, 7 ಮತ್ತು 8 ಅನ್ನು ಬಳಸುವ ವಿಧಾನ ಮತ್ತು ಅವುಗಳ ನಿಖರ ನಿರ್ವಹಣೆಯ ಬಗ್ಗೆ ತಿಳಿಸಿದ ಅವರು, ಇದಕ್ಕಾಗಿ ನಿಯಮಿತವಾಗಿ ಅರ್ಜಿಗಳನ್ನು ಸಲ್ಲಿಸುವ ಹಾಗೂ ಪರೀಶೀಲಿಸುವ ವ್ಯವಸ್ಥೆಯ ಕುರಿತು ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಆಗಿರುವ ಆಹಾರ ಇಲಾಖೆಯ ಉಪನಿರ್ದೇಶಕ ಕೆ.ಆರ್. ದೇವರಾಜ್, ಸಹಾಯಕ ಮತದಾರರ ನೋಂದಣಾಧಿಕಾರಿ ಆದ ತಹಶೀಲ್ದಾರ ನರಸಪ್ಪ, ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ, ಉಪ ತಹಸೀಲ್ದಾರ್ ರಾಜಶೇಖರ್, ಶಿರಸ್ತೇದಾರ್ ವಿಜಯ ಕುಮಾರ್, ಆರ್ಐಗಳಾದ ಸುರೇಶ್, ಭದ್ರಿ, ಸಂಪನ್ಮೂಲ ವ್ಯಕ್ತಿ ಗುರುಬಸವರಾಜ್, ಜಿಲ್ಲಾ ಚುನಾವಣಾ ಕಚೇರಿ ಸಿಬ್ಬಂದಿ ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 