ಡಿಸ್ಟಿಂಕ್ಷನ್ ಪಡೆದ ಕಾಲೇಜು ಪ್ರಾಚಾರ್ಯರು ವಿದ್ಯಾರ್ಥಿಗೆ ಭೇಟಿ
College principal visits student who received distinction
ಲೋಕದರ್ಶನ ವರದಿ
ಹೂವಿನಹಡಗಲಿ 21: ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಗಳಿಸಿದ ತಮ್ಮ ಕಾಲೇಜಿನ ವಿದ್ಯಾರ್ಥಿನಿಯರ ಮನೆಗೆ ಪ್ರಾಚಾರ್ಯರು ತಮ್ಮ ಉಪನ್ಯಾಸಕ ಸಿಬ್ಬಂದಿಯೊಂದಿಗೆ ತೆರಳಿ ಸನ್ಮಾನಿಸಿ ವಿನೂತನ ಪ್ರಯೋಗಕ್ಕೆ ಮುನ್ನುಡಿ ಬರೆದರು. ಸತತ ಎರಡು ವರ್ಷಗಳ ಕಾಲ ತಮ್ಮ ಮಕ್ಕಳ ವಿಶೇಷವಾಗಿ ಹೆಣ್ಣು ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹ ನೀಡಿರುವ ಪಾಲಕರ ಜೊತೆ ಮಕ್ಕಳಿಗೆ ಸನ್ಮಾನಿಸಿದರು.ಜೊತೆಗೆ ಅವರಿಗೆ ನೈತಿಕ ಸ್ಥೈರ್ಯ ತುಂಬಿದಂತೆ ಆಗುತ್ತದೆಎಂದು ಕಾಲೇಜಿನ ಪ್ರಾಂಶುಪಾಲ ಎ ಕೊಟ್ರಗೌಡ ಅಭಿಮತ ವ್ಯಕ್ತಪಡಿಸಿದರು.ಕಾಲೇಜಿನ ಡಿಸ್ಟಿಂಕ್ಷನ್ ಪಡೆದಿರುವ ಒಟ್ಟು 21 ವಿದ್ಯಾರ್ಥಿನಿಯರ ಮನೆಗೆ ತೆರಳಿ ಅಭಿನಂದನ ಪತ್ರ ನೀಡಿ ಸನ್ಮಾನಿಸುತ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು.ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಎ. ಶಿವಕುಮಾರ್, ದುಷ್ಯಂತ, ಶಂಕರ್, ವೀರೇಶ್, ಪರಶುರಾಮ ನಾಗೋಜಿ ಮಂಜುನಾಥ್ ಜೊತೆಗಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 